ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಮ್ಸ್ ಆಸ್ಪತ್ರೆ: ಆಮ್ಲಜನಕ ಘಟಕ ಉದ್ಘಾಟನೆ

Last Updated 17 ಸೆಪ್ಟೆಂಬರ್ 2021, 15:21 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ ₹. 1 ಕೋಟಿ ವೆಚ್ಚದಲ್ಲಿ ಸ್ಥಾಪಿಸಿದ 660 ಎಲ್‍ಪಿಎಂ ಸಾಮಥ್ರ್ಯದ ಆಮ್ಲಜನಕ ಘಟಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಶುಕ್ರವಾರ ಉದ್ಘಾಟಿಸಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಕೋವಿಡ್ ಮೊದಲ ಹಾಗೂ ಎರಡನೇ ಅಲೆಯಲ್ಲಿ ಜನ ಸಂಕಷ್ಟ ಅನುಭವಿಸಿದ್ದರು. ಹೀಗಾಗಿ ಮೂರನೇ ಅಲೆ ಮುಂಜಾಗ್ರತಾ ಕ್ರಮವಾಗಿ ಆಮ್ಲಜನಕ ಕೊರತೆ ನೀಗಿಸಲು ಆಮ್ಲಜನಕ ಘಟಕ ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕ ರಹೀಂಖಾನ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT