ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಮ್ಸ್‌ನಲ್ಲಿ 10 ಹೊಸ ಪಿಜಿ ಕೋರ್ಸ್‌ ಆರಂಭ

Published : 13 ಆಗಸ್ಟ್ 2024, 16:10 IST
Last Updated : 13 ಆಗಸ್ಟ್ 2024, 16:10 IST
ಫಾಲೋ ಮಾಡಿ
Comments

ಬೀದರ್‌: ‘ನಗರದ ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಬ್ರಿಮ್ಸ್‌) ಹತ್ತು ವಿಭಾಗಗಳಲ್ಲಿ ಹೊಸ ಸ್ನಾತಕೋತ್ತರ ಕೋರ್ಸ್‌ಗಳನ್ನು ಪ್ರಾರಂಭಿಸಲು ಅನುಮತಿ ಸಿಕ್ಕಿದೆ’ ಎಂದು ಬ್ರಿಮ್ಸ್‌ ನಿರ್ದೇಶಕ ಶಿವಕುಮಾರ ಶೆಟಕಾರ ತಿಳಿಸಿದ್ದಾರೆ.

ಕೀಲು ಮತ್ತು ಮೂಳೆ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಸೂಕ್ಷ್ಮ ಜೀವಿಶಾಸ್ತ್ರ ವಿಭಾಗ, ವೈದ್ಯಕೀಯ ಸಮುದಾಯ ವಿಭಾಗ, ವೈದ್ಯಕೀಯ ವಿಭಾಗದಲ್ಲಿ ತಲಾ ಐದು ಸೀಟುಗಳು, ರೋಗ ಲಕ್ಷಣ ಶಾಸ್ತ್ರ, ಅರವಳಿಕೆ ವಿಭಾಗ, ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ವಿಭಾಗದಲ್ಲಿ ತಲಾ ಮೂರು ಸೀಟುಗಳಿಗೆ ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗ ಅನುಮತಿ ಕೊಟ್ಟಿದೆ ಎಂದು ತಿಳಿಸಿದ್ದಾರೆ. 

ವಿವಿಧ ವಿಭಾಗಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳನ್ನು ಸ್ಥಾಪಿಸಲು ಅನುಮೋದನೆ ನೀಡಿರುವುದರಿಂದ ಜಿಲ್ಲೆಯ ಮತ್ತು ಜಿಲ್ಲೆಗೆ ಹೊಂದಿಕೊಂಡಿರುವ ತೆಲಂಗಾಣ ಮತ್ತು ಮಹಾರಾಷ್ಟ್ರದ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ. ಸ್ಥಳೀಯ ವಿದ್ಯಾರ್ಥಿಗಳು ಎಂಬಿಬಿಎಸ್ ಮುಗಿಸಿದ ನಂತರ ಉನ್ನತ ವ್ಯಾಸಂಗಕ್ಕಾಗಿ ಬೇರೆ ಕಡೆ ಹೋಗುವುದು ತಪ್ಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಡಿ ಜಿಲ್ಲೆ ಬೀದರ್‌ನಲ್ಲಿ 2007ನೇ ಸಾಲಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಮಂಜೂರಾತಿ ಸಿಕ್ಕಿತ್ತು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT