ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ; ವರದಿಗೆ ಡಿಸಿಗೆ ಸೂಚನೆ

Published 24 ಜೂನ್ 2024, 16:01 IST
Last Updated 24 ಜೂನ್ 2024, 16:01 IST
ಅಕ್ಷರ ಗಾತ್ರ

ಬೀದರ್‌: ಬ್ರಿಮ್ಸ್‌ ಅವ್ಯವಸ್ಥೆಗೆ ಸಂಬಂಧಿಸಿದಂತೆ ತಕ್ಷಣವೇ ಕಚೇರಿಗೆ ವರದಿ ಸಲ್ಲಿಸಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.

‘ಬೀದರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ನೆಲದ ಮೇಲೆ ಮಲಗುವ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿದ್ದರೂ ಸಿಬ್ಬಂದಿ ನೀಡುತ್ತಿಲ್ಲ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ವರದಿ ಸಲ್ಲಿಸಬೇಕು’ ಎಂದು ಸಚಿವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಎ.ಆರ್. ರವಿ ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT