ಬೀದರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿರುವ (ಬ್ರಿಮ್ಸ್) ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ಕೋರ್ಸ್ ಸೀಟುಗಳ ಸಂಖ್ಯೆ ಹೆಚ್ಚಿಸಬೇಕೆಂಬ ಬೇಡಿಕೆಗೆ ಸ್ಪಂದನೆ ದೊರೆತಿದೆ.

2025–26ನೇ ಸಾಲಿನಿಂದ ಜಾರಿಗೆ ಬರುವಂತೆ ಸದ್ಯಕ್ಕೀರುವ 60 ಸೀಟುಗಳ ಸಂಖ್ಯೆ 100ಕ್ಕೆ ಹೆಚ್ಚಿಸಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನರ್ಸಿಂಗ್ ಕೋರ್ಸ್ ಸೀಟುಗಳ ಪ್ರವೇಶ ಮಿತಿಯನ್ನು 60ರಿಂದ 100ಕ್ಕೆ ಹೆಚ್ಚಿಸಿ ಅನುಮತಿ ನೀಡಿದೆ. ಸೀಟುಗಳ ಸಂಖ್ಯೆ ಹೆಚ್ಚಿಸಬೇಕೆಂಬ ಬೇಡಿಕೆ ಇತ್ತು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಕೂಲಂಕಷವಾಗಿ ಚರ್ಚಿಸಿದ ನಂತರ ಈ ತೀರ್ಮಾನಕ್ಕೆ ಬರಲಾಗಿದೆ. ಎಲ್ಲಾ ಸೀಟುಗಳನ್ನು ಸರ್ಕಾರಿ ಕೋಟಾದಡಿ ತುಂಬಬೇಕು. ಕೋರ್ಸ್ ಸಂಯೋಜನೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಮಂಜೂರಾತಿ ಪಡೆಯತಕ್ಕದ್ದು. ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಯಾವುದೇ ಕಾರಣಕ್ಕೂ 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಪ್ರವೇಶ ಪಡೆಯುವಂತಿಲ್ಲ ಎಂದು ಷರತ್ತು ಹಾಕಿದೆ.

ವಿದ್ಯಾರ್ಥಿಗಳ ಪ್ರವೇಶವನ್ನು 2003ರ ಕರ್ನಾಟಕ ನರ್ಸಿಂಗ್, ಫಾರ್ಮಸಿ ಮತ್ತು ಫಿಸಿಯೋಥೆರಪಿ ಕೋರ್ಸ್ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ಆಯ್ಕೆ ನಿಯಮಾವಳಿ ಪ್ರಕಾರವೇ ಮಾಡತಕ್ಕದ್ದು. ಕೋರ್ಸ್ಗಳ ಪ್ರವೇಶಕ್ಕೆ ಸರ್ಕಾರಿ ಕೋಟಾದ ಶೇ 100ರಷ್ಟು ಪ್ರವೇಶಾತಿ ಮಾಡತಕ್ಕದ್ದು. ಸಂಸ್ಥೆಯಲ್ಲಿ ಲಭ್ಯವಿರುವ ಆಂತರಿಕ ಸಂಪನ್ಮೂಲಗಳನ್ನು ಬಳಸಿಕೊಂಡೇ ಕೋರ್ಸ್ ನಡೆಸಬೇಕು ಎಂದು ಕಟ್ಟಪ್ಪಣೆ ಮಾಡಲಾಗಿದೆ.

‘ಶುಲ್ಕ ಕಡಿಮೆ ಗುಣಮಟ್ಟದ ಶಿಕ್ಷಣ’: ರಾಜಕುಮಾರ ಮಾಳಗೆ

‘ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಪ್ರವೇಶಕ್ಕೆ ಭಾರಿ ಬೇಡಿಕೆ ಇದೆ. ಪ್ರವೇಶಕ್ಕೆ ನಮ್ಮ ಕಾಲೇಜಿನಲ್ಲಿ ಸುಮಾರು ₹10 ಸಾವಿರ ಶುಲ್ಕವಿದ್ದರೆ ಖಾಸಗಿ ಕಾಲೇಜುಗಳಲ್ಲಿ ₹1ರಿಂದ ₹1.50 ಲಕ್ಷದ ವರೆಗೆ ಶುಲ್ಕ ಪಡೆಯಲಾಗುತ್ತಿದೆ. ಮೇಲಿಂದ ಗುಣಮಟ್ಟದ ಶಿಕ್ಷಣ ಕೂಡ ಒದಗಿಸಲಾಗುತ್ತಿದೆ’ ಎಂದು ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ರಾಜಕುಮಾರ ಮಾಳಗೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. ‘2021–22ನೇ ಸಾಲಿನಲ್ಲಿ ನರ್ಸಿಂಗ್ ಕಾಲೇಜು ಆರಂಭಗೊಂಡಿದೆ. ಆದರೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಸೀಟುಗಳ ಸಂಖ್ಯೆ ಸರ್ಕಾರ ಹೆಚ್ಚಿಸಿದೆ. ಈ ಭಾಗದ ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ಹೇಳಿದ್ದಾರೆ.

ಒಂದು ಸರ್ಕಾರಿ 18 ಖಾಸಗಿ ನರ್ಸಿಂಗ್ ಕಾಲೇಜು

ಬೀದರ್ ಜಿಲ್ಲೆಯಲ್ಲಿ ಬ್ರಿಮ್ಸ್ನಡಿ ನಡೆಯುತ್ತಿರುವ ಒಂದು ಸರ್ಕಾರಿ ನರ್ಸಿಂಗ್ ಕಾಲೇಜು ಇದ್ದರೆ ಬಿಎಸ್ಸಿ ನರ್ಸಿಂಗ್ ಕೋರ್ಸ್ ನಡೆಸುವ 18 ಖಾಸಗಿ ಕಾಲೇಜುಗಳಿವೆ. ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಶುಲ್ಕದಲ್ಲಿ ಅಜಗಜಾಂತರ ವ್ಯತ್ಯಾಸವಿದೆ. ಬೆರಳೆಣಿಕೆಯಷ್ಟು ಕಾಲೇಜುಗಳನ್ನು ಹೊರತುಪಡಿಸಿದರೆ ಬಹುತೇಕ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯುವುದಿಲ್ಲ. ಕನಿಷ್ಠ ಮೂಲಸೌಕರ್ಯಗಳು ಇಲ್ಲ ಎಂಬ ಆರೋಪ ಇದೆ. ಗ್ರಾಮೀಣ ಭಾಗದ ಬಡ ಪ್ರತಿಭಾವಂತ ಮಕ್ಕಳಿಗೆ ಖಾಸಗಿಯಲ್ಲಿ ಪ್ರವೇಶ ಸಾಧ್ಯವಾಗುತ್ತಿಲ್ಲ. ಈಗ ಸರ್ಕಾರಿ ನರ್ಸಿಂಗ್ನಲ್ಲಿ ಸೀಟುಗಳ ಸಂಖ್ಯೆ ಹೆಚ್ಚಳ ಮಾಡಿರುವುದರಿಂದ ಅನುಕೂಲವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.