ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕುಶ್ ಗೋಖಲೆ ಹುಮನಾಬಾದ್ ಬಿಎಸ್ಪಿ ಅಭ್ಯರ್ಥಿ

Last Updated 29 ಮಾರ್ಚ್ 2023, 12:33 IST
ಅಕ್ಷರ ಗಾತ್ರ

ಹುಮನಾಬಾದ್: ‘ಬಹುಜನ ಸಮಾಜ ಪಕ್ಷದಿಂದ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ನನ್ನ ಹೆಸರು ಘೋಷಣೆ ಮಾಡಿದ್ದಾರೆ’ ಎಂದು ಬಿಎಸ್ಪಿ ಅಭ್ಯರ್ಥಿ ಅಂಕುಶ್ ಗೋಖಲೆ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪಕ್ಷ ನನ್ನನ್ನು ಅಭ್ಯರ್ಥಿಯನ್ನಾಗಿ ಪ್ರಕಟಿಸಿದೆ. ಹೀಗಾಗಿ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾ‌ಸವಿಟ್ಟು ಮತ ನೀಡಬೇಕು.‌ ಕ್ಷೇತ್ರದಲ್ಲಿ ಕಳೆದ 17 ವರ್ಷಗಳಿಂದ ಸತತವಾಗಿ ಅಧಿಕಾರ ದಲ್ಲಿರುವ ಶಾ‌ಸಕ ರಾಜಶೇಖರ ಪಾಟೀಲ ಅವರು ಜನರ ಕಷ್ಟ ಸುಖಗಳಲ್ಲಿ ಭಾಗವಹಿಸಿಲ್ಲ’ ಎಂದು ದೂರಿದರು.

ನನಗೆ ಅಧಿಕಾರ ಇಲ್ಲದಿದ್ದರೂ ಅನೇಕ ಬಡ ಜನರ ಸುಮಾರು 500 ಎಕರೆ ಬಗರ್ ಹುಕುಂ ಭೂಮಿ ಒದಗಿಸಿಕೊಡಲು ಹೋರಾಟ ನಡೆಸಿದ್ದೇನೆ. ಪಟ್ಟಣ ಹೊರವಲಯದ ಕೆಲ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಹಳ್ಳಿಗಳಲ್ಲಿ ಹರಿ ಬಿಡುತ್ತಿರುವುದನ್ನು ವಿರೋಧಿಸಿ ಹೋರಾಟ ನಡೆಸಿದ್ದೇನೆ. ಕಾರ್ಖಾನೆಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿದ್ದೇನೆ. ಆದರೆ ಶಾಸಕ ರಾಜಶೇಖರ ಪಾಟೀಲ ಅವರು ಕಾರ್ಖಾನೆಯವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಕ್ಷೇತ್ರದ ಜನ ಆಶೀರ್ವಾದ ಮಾಡಿದರೆ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪ್ರಾರಂಭಿಸುತ್ತೇನೆ. ಹುಮನಾಬಾದ್ ಪಟ್ಟಣದ ಹೊರವಲಯದ ಕೆಲ ಕಾರ್ಖಾನೆಗಳನ್ನು ಬಂದ್ ಮಾಡಿಸುತ್ತೇನೆ.‌ ಬಗರ್ ಹುಕುಂ ಭೂಮಿ ಒದಗಿ‌ಸಲು ಪ್ರಾಮಾ ಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

ಜಮೀಲ್ ಖಾನ್ ಸೇರಿದಂತೆ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT