ಹುಮನಾಬಾದ್: ತಾಲ್ಲೂಕಿನ ಹಳ್ಳಿಖೇಡ್ (ಬಿ) ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿ ಮಾಜಿ ಶಾಸಕ ಸುಭಾಷ ಕಲ್ಲೂರ ಹಾಗೂ ಉಪಾಧ್ಯಕ್ಷರಾಗಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಅವಿರೋಧವಾಗಿ ಆಯ್ಕೆಗೊಂಡರು.

ಕಾರ್ಖಾನೆಯ ಆವರಣದಲ್ಲಿ ಬುಧವಾರ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುಭಾಷ ಕಲ್ಲೂರ, ಉಪಾಧ್ಯಕ್ಷ ಸ್ಥಾನಕ್ಕೆ ಶೈಲೇಂದ್ರ ಬೆಲ್ದಾಳೆ ಅವರು ಮಾತ್ರ ನಾಮಪತ್ರ ಸಲ್ಲಿಸಿದರು. ಪ್ರತಿಸ್ಪರ್ಧಿ ಇಲ್ಲದ ಕಾರಣ ಚುನಾವಣಾ ಅಧಿಕಾರಿ ತಹಶೀಲ್ದಾರ್ ಜೈಯಶ್ರೀ ಅವರು ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಸುಭಾಷ ಕಲ್ಲೂರ ಹಾಗೂ ಉಪಾಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ನಮ್ಮ ಮೇಲೆ ನಂಬಿಕೆ ಇಟ್ಟು ಬಹುಮತದಿಂದ ಗೆಲ್ಲಿಸಿದ ಮತದಾರರ ನಂಬಿಕೆಯನ್ನು ಹುಸಿ ಮಾಡುವುದಿಲ್ಲ. ಸರ್ಕಾರದ ಮೇಲೆ ಒತ್ತಡ ಹೇರಿ ಅನುದಾನ ತರುವ ಮೂಲಕ ಕಾರ್ಖಾನೆಯನ್ನು ಪ್ರಾರಂಭಿಸುತ್ತೇವೆ’ ಎಂದರು.

ಆಡಳಿತ ಮಂಡಳಿಯ ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ, ಮಾಣಕಪ್ಪ ಸುಭಾಷ ಖಾಶೆಂಪೂರ್, ವಿಶ್ವನಾಥ ಪಾಟೀಲ, ಅಪ್ಪಾರಾವ ಇಸ್ಮಾಯಿಲಪ್ಪ, ರಾಜಪ್ಪ, ಶ್ರೀನಿವಾಸ ರಘುನಾಥರಾವ, ಅಶೋಕ ಪಾಟೀಲ, ಕಲಾವತಿ ಶಿವರಾಜ ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶೀವಾನಂದ ಮಂಠಾಳಕರ್, ಬಿಡಿಎ ಅಧ್ಯಕ್ಷ ಬಾಬು ವಾಲಿ, ಅಂಬೇಡ್ಕರ್ ನಿಗಮದ ಸದಸ್ಯ ಬಸವರಾಜ ಆರ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸೋಮನಾಥ ಪಾಟೀಲ, ಮಲ್ಲಿಕಾರ್ಜುನ ಪ್ರಭಾ, ತಾ.ಪಂ ಸದಸ್ಯ ನಾಗೇಶ ಕಲ್ಲೂರ, ಜಗನ್ನಾಥ ಪಾಟೀಲ, ಹಣಮಂತರಾವ ಪಾಟೀಲ, ಅರುಣಕುಮಾರ ಕುಲಕರ್ಣಿ, ರಾಜರೆಡ್ಡಿ ಶಾಬಾದಿ, ರಮೇಶ ಕಲ್ಲೂರ, ಚನ್ನಬಸಪ್ಪ, ಬಸವರಾಜ ವಗ್ದಾಳೆ ನಿರ್ಣಾವಾಡಿ, ಜಗನಾಥ ಮಜಿಗೆ, ಮಲ್ಲಯ್ಯ ಸ್ವಾಮಿ ಅರಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.