ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ, ಶೆಟ್ಟರ್‌ ಮನೆಗೆ ಹೋಗ್ತಾರಾ?

7
ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸವಾಲು

ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ, ಶೆಟ್ಟರ್‌ ಮನೆಗೆ ಹೋಗ್ತಾರಾ?

Published:
Updated:
Deccan Herald

ಬೀದರ್‌: ‘ವಿಧಾನಸಭಾ ಉಪ ಚುನಾವಣೆಯ ನಂತರವೂ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಉಳಿದರೆ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್‌ ಮನೆಗೆ ಹೋಗ್ತಾರಾ’ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸವಾಲು ಹಾಕಿದರು.

ಉಪ ಚುನಾವಣೆಯ ಬಳಿಕ ಕುಮಾರಸ್ವಾಮಿ ಮನೆಗೆ ಹೋಗಲಿದ್ದಾರೆ ಎಂದು ಜಗದೀಶ ಶೆಟ್ಟರ್‌ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ‘ಬಿಜೆಪಿ ಮುಖಂಡರು ಬಾಲಿಶ ಹೇಳಿಕೆ ನೀಡುತ್ತಿದ್ದಾರೆ’ ಎಂದು ಮಾಧ್ಯಮಗೋಷ್ಠಿಯಲ್ಲಿ ಕುಟುಕಿದರು.

‘ಅಭಿವೃದ್ಧಿ ಪರ ವಿಚಾರಗಳನ್ನು ಪ್ರಸ್ತಾಪ ಮಾಡುವುದನ್ನು ಬಿಟ್ಟು ಇಲ್ಲ, ಸಲ್ಲದ ಹೇಳಿಕೆ ಕೊಡುತ್ತಿದ್ದಾರೆ. ಮಾಧ್ಯಮದವರು ಪದೇ ಪದೇ ನಮಗೆ ಇಂತಹ ಪ್ರಶ್ನೆಗಳನ್ನು ಕೇಳುವ ಬದಲು ಅವರು ಮನೆಗೆ ಹೋಗಲು ಸಿದ್ಧರಿದ್ದಾರಾ? ಎಂದು ಅವರನ್ನೇ ಕೇಳಬೇಕು’ ಎಂದು ಖಾರವಾಗಿ ಹೇಳಿದರು.

‘ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷಕ್ಕೆ ಇರುವಷ್ಟೇ ಜವಾಬ್ದಾರಿ ವಿರೋಧ ಪಕ್ಷಕ್ಕೂ ಇದೆ. ಜವಾಬ್ದಾರಿ ಸ್ಥಾನದಲ್ಲಿದ್ದವರು ಎಚ್ಚರಿಕೆಯಿಂದ ಹೇಳಿಕೆಗಳನ್ನು ಕೊಡುವುದು ಒಳ್ಳೆಯದು’ ಎಂದು ಕಿವಿಮಾತು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !