ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌತಮ ಬುದ್ಧ, ಅಂಬೇಡ್ಕರ್‌ ಮೂರ್ತಿ ಉದ್ಘಾಟನೆ

Published 8 ಏಪ್ರಿಲ್ 2024, 16:33 IST
Last Updated 8 ಏಪ್ರಿಲ್ 2024, 16:33 IST
ಅಕ್ಷರ ಗಾತ್ರ

ಬೀದರ್‌: ಇಲ್ಲಿನ ಬ್ಯಾಂಕ್‌ ಕಾಲೊನಿಯಲ್ಲಿ ಭಾನುವಾರ ಸಂಜೆ ಮಹಾತ್ಮ ಗೌತಮ ಬುದ್ಧ, ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ನೂತನ ಮೂರ್ತಿಗಳ ಉದ್ಘಾಟನಾ ಸಮಾರಂಭ ನಡೆಯಿತು.

ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಉದ್ಘಾಟಿಸಿ, ‘ದೇಶದ ಎಲ್ಲ ಜನರಿಗೂ ಸಮಾನ ಹಕ್ಕುಗಳನ್ನು ಒದಗಿಸುವ ಜಗತ್ತಿನ ಅತಿ ಶ್ರೇಷ್ಠ ಸಂವಿಧಾನವನ್ನು ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ರಚಿಸಿದ್ದಾರೆ. ಗೌತಮ ಬುದ್ಧ ಅವರು ಜಗತ್ತಿಗೆ ಶಾಂತಿ ಸಂದೇಶ ಕೊಟ್ಟಿದ್ದಾರೆ. ಅಂತಹ ಮಹಾನುಭಾವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು ಉತ್ತಮ ಕೆಲಸ. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ನಾಗಸೇನ ಟ್ರಸ್ಟ್‌ ಅಧ್ಯಕ್ಷೆ ಸುಜಾತಾ ಹೊಸಮನೆ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರಾಜಕುಮಾರ ಗಂದಗೆ, ಪ್ರಮುಖರಾದ ವಿನೋದ್ ಅಪ್ಪೆ, ಸಾಗರ್ ಶಂಭು, ಡಾ.ಲೋಕೇಶ್, ನಾಗನಾಥರಾವ್‌ ನೀಡೋದಾ, ಮಹೇಶ್ ನೀಡೋದಿಕರ, ಸತ್ಯಜೀತ ನೀಡೋದಿಕರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT