ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: 23ರಂದು ಗೌತಮ ಬುದ್ಧ ಜಯಂತಿ

Published 18 ಮೇ 2024, 15:14 IST
Last Updated 18 ಮೇ 2024, 15:14 IST
ಅಕ್ಷರ ಗಾತ್ರ

ಬೀದರ್‌: ಮಹಾತ್ಮ ಗೌತಮ ಬುದ್ಧರ 2568ನೇ ಜಯಂತಿ ಅಂಗವಾಗಿ ಮೇ 23ರಂದು ನಗರದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ನಗರದ ಶಹಾಗಂಜ್ ಬುದ್ಧ ವಿಹಾರದಿಂದ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತ, ಭಗತ್‌ಸಿಂಗ್ ವೃತ್ತ, ಬಸವೇಶ್ವರ ವೃತ್ತ, ಬೊಮ್ಮಗೊಂಡೇಶ್ವರ ವೃತ್ತದಿಂದ ಗಾಂಧಿಗಂಜ್ ಬುದ್ಧ ವಿಹಾರದ ವರೆಗೆ ಬುದ್ಧನ ಪ್ರತಿಮೆಯ ಭವ್ಯ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದ ಸಾನ್ನಿಧ್ಯ ಭಂತೆ ಧಮ್ಮಾನಂದ ಮಹಾಥೇರೋ, ಭಂತೆ ಜ್ಞಾನಸಾಗರ ವಹಿಸುವರು. 

ಮೆರವಣಿಗೆಯಲ್ಲಿ ಬುದ್ಧ ಸ್ತೂಪ, ಬೋಧಿ ವೃಕ್ಷ ಸ್ತಬ್ದ ಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿರಲಿವೆ. ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಧಮ್ಮ ಸಂಸ್ಕೃತಿ ಮತ್ತು ಶಿಕ್ಷಣ ಜಾಗೃತಿ ವೇದಿಕೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT