ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ರಾಜ್ಯ ಘಟಕ ವಿಸರ್ಜನೆ

Last Updated 24 ಮಾರ್ಚ್ 2019, 15:00 IST
ಅಕ್ಷರ ಗಾತ್ರ

ಬೀದರ್‌: ‘ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ರಾಜ್ಯ ಹಾಗೂ ಜಿಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದೆ. ಮೂರು ತಿಂಗಳಲ್ಲಿ ಎಲ್ಲ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು’ ಎಂದು ಬುದ್ಧಿಸ್ಟ್ ಸೊಸೈಟಿ ಆಫ್‌ ಇಂಡಿಯಾ ರಾಷ್ಟ್ರೀಯ ಘಟಕದ ಅಧ್ಯಕ್ಷ ರಾಜರತನ್ ಅಂಬೇಡ್ಕರ್‌ ಹೇಳಿದರು.

‘1977 ರಿಂದ 2015ರವರೆಗೂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಹಳೆಯ ಸಮಿತಿ ವಿಸರ್ಜಿಸಿ ರಾಷ್ಟ್ರ ಮಟ್ಟದಲ್ಲಿ ಹೊಸ ಸಮತಿ ರಚಿಸಲಾಗಿದೆ’ ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

‘ಬಾಬಾ ಸಾಹೇಬ ಅಂಬೇಡ್ಕರ್‌ ತತ್ವದಡಿ ಸಾಗಿರುವ ಬುದ್ಧಿಸ್ಟ್‌ ಸೊಸೈಟಿಯ ನಿಯಮಗಳನ್ನು ಪದಾಧಿಕಾರಿಗಳಿಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲಾಗುವುದು. ಅದರ ಧ್ಯೇಯ ಉದ್ದೇಶ ವಿವರಿಸಲಾಗುವುದು. ಬಾಬಾಸಾಹೇಬರ ತತ್ವ, ಸಿದ್ಧಾಂತವನ್ನು ಒಪ್ಪಿಕೊಂಡವರು ಸಮಿತಿಯಲ್ಲಿ ಮುಂದುವರಿಯಬಹುದು’ ಎಂದು ಹೇಳಿದರು.

‘ಈವರೆಗೂ ಉಪ ನೋಂದಣಿ ಅಧಿಕಾರಿಗಳ ಕಚೇರಿಯಲ್ಲಿ ಸಂಸ್ಥೆಯನ್ನು ನೋಂದಣಿ ಮಾಡಿಕೊಳ್ಳದವರು ನೋಂದಣಿ ಮಾಡಿಕೊಳ್ಳಬೇಕು. ಬುದ್ಧಿಸ್ಟ್‌ ಸೊಸೈಟಿಯ ಆಸ್ತಿ ಪ್ರಧಾನ ಕಚೇರಿಯ ಅಧೀನಕ್ಕೆ ಒಳಪಡಲಿದೆ. ಇದಕ್ಕೂ ಮೊದಲು ಆರ್‌ಟಿಐ ಅರ್ಜಿ ಸಲ್ಲಿಸಿ ನಿಖರ ಮಾಹಿತಿ ಪಡೆಯಲಾಗುವುದು. ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT