ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಅಭಿಪ್ರಾಯ

Last Updated 8 ಮಾರ್ಚ್ 2021, 15:33 IST
ಅಕ್ಷರ ಗಾತ್ರ

ಪ್ರವಾಸೋದ್ಯಮಕ್ಕೆ ಪ್ರಾತಿನಿಧ್ಯ ನೀಡಬೇಕಿತ್ತು

ರಾಜ್ಯದಲ್ಲಿ ಹೊಸದಾಗಿ ಆಯುಷ್ಯ ವಿಶ್ವವಿದ್ಯಾಲಯ ಆರಂಭಿಸಲು ನಿರ್ಧರಿಸಿರುವುದು ಒಳ್ಳೆಯದು. ಆದರೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಿಲ್ಲ. ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪ್ರಾತಿನಿಧ್ಯ ನೀಡಿದ್ದರೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯುತ್ತಿದ್ದವು.

–ಡಾ.ಸುಜಾತಾ ಹೊಸಮನಿ, ಆಯುಷ್‌ ವೈದ್ಯರು

ಕಲ್ಯಾಣ ಕರ್ನಾಟಕಕ್ಕೆ ಪ್ರಾತಿನಿಧ್ಯ

ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರಾತಿನಿಧ್ಯ ಕಲ್ಪಿಸಿರುವುದು ಸಂತಸ ಉಂಟು ಮಾಡಿದೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಜೆಟ್‍ನಲ್ಲಿ ₹1,500 ಕೋಟಿ ಅನುದಾನ ಮೀಸಲಿಟ್ಟಿರುವುದು ಮಹತ್ವದ ಹೆಜ್ಜೆಯಾಗಿದೆ. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ₹ 500 ಕೋಟಿ ನಿಗದಿಪಡಿಸಿ, ₹ 200 ಕೋಟಿ ಬಿಡುಗಡೆ ಮಾಡಿರುವುದು ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ನೀಡಿದ ಬಸವಾದಿ ಶರಣರಿಗೆ ಸಲ್ಲಿಸಿದ ಗೌರವವಾಗಿದೆ. ಕೋವಿಡ್‍ನಿಂದ ಆರ್ಥಿಕ ಹಿನ್ನಡೆ ಉಂಟಾದರೂ, ಸರ್ಕಾರ ಉತ್ತಮ ಬಜೆಟ್ ಮಂಡಿಸಿದೆ.

–ವಿಜಯಲಕ್ಷ್ಮಿ ಮಠ, ಸಿಇಒ, ನಿರ್ಮಾಣ ಭಾರತಿ ಕೋ ಆಪರೇಟಿವ್ ಬ್ಯಾಂಕ್, ಬೀದರ್

ಮಹಿಳೆಯರ ಅಭಿವೃದ್ಧಿಗೆ ಒತ್ತು

ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವಿವಿಧ ಯೋಜನೆಗಳ ಘೋಷಣೆ ಮೂಲಕ ಮಹಿಳೆಯರ ಅಭಿವೃದ್ಧಿಗೆ ಒತ್ತು ನೀಡಿದೆ. ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಮಹಿಳಾ ಸಂಜೀವಿನಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಲಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಲಪಡಿಸಲು ಅಗತ್ಯ ಅನುದಾನ ಮೀಸಲಿಟ್ಟಿರುವುದು ಉತ್ತಮ ಬೆಳವಣಿಗೆಯಾಗಿದೆ.

–ಮಹಾದೇವಿ ಬೀದೆ, ಪ್ರಾಚಾರ್ಯೆ, ದತ್ತಗಿರಿ ಮಹಾರಾಜ್ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆ, ಬೀದರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT