ಭಾನುವಾರ, ಆಗಸ್ಟ್ 1, 2021
20 °C

ಅಂತರ್ಜಲ ಹೆಚ್ಚಿಸಲು 100 ಕೆರೆ ನಿರ್ಮಿಸಿ: ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ‘ಜಿಲ್ಲೆಯಲ್ಲಿ ದಿನೇ ದಿನೇ ಅಂತರ್ಜಲಮಟ್ಟ ಕುಸಿತ ಆಗಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿ ಕಾಡುತ್ತಿದೆ. ಅಂತರ್ಜಲ ಹೆಚ್ಚಿಸಲು 100 ಕೆರೆ ನಿರ್ಮಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ಈ ಕುರಿತು ಅವರು ಸಣ್ಣ ನೀರಾವರಿ ಇಲಾಖೆ ಸಚಿವರು ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ‘ಗ್ರಾಮೀಣ ಪ್ರದೇಶದಲ್ಲಿ ಮಳೆಗಾಲದಲ್ಲೂ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಒಣ ಪ್ರದೇಶವಾದ ಕಮಲನಗರ ಹಾಗೂ ಔರಾದ್ ತಾಲ್ಲೂಕಿನಲ್ಲಿ ಸಮಸ್ಯೆ ತೀವ್ರತೆ ಜಾಸ್ತಿ ಇದೆ. 500ರಿಂದ 800 ಅಡಿ ಆಳದ ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳಲಿದೆ. ಈ ಕಾರಣ ಸರ್ಕಾರ ಅಂತರ್ಜಲ ಹೆಚ್ಚಿಸಲು ವಿಶೇಷ ಯೋಜನೆ ರೂಪಿಸಬೇಕು. ಅದರ ಮೊದಲ ಭಾಗವಾಗಿ 100 ಹೊಸ ಕೆರೆಗಳು ನಿರ್ಮಿಸಬೇಕು. ಇರುವ ಹಳೆ ಕೆರೆ ಒತ್ತುವರಿ ತೆರವು ಮಾಡಿ ಹೂಳು ತೆಗೆದು ನೀರು ತುಂಬಿಸುವ ಕಾರ್ಯ ತುರ್ತಾಗಿ ಆಗಬೇಕು’ ಎಂದು ಅವರು ಮನವಿಪತ್ರದಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು