ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌಷ್ಟಿಕ ಕೈತೋಟ ನಿರ್ಮಿಸಿ

ವಿಚಾರ ಸಂಕಿರಣದಲ್ಲಿ ಶಂಭುಲಿಂಗ ಹಿರೇಮಠ ಸಲಹೆ
Last Updated 18 ಸೆಪ್ಟೆಂಬರ್ 2020, 14:55 IST
ಅಕ್ಷರ ಗಾತ್ರ

ಜನವಾಡ: ಗ್ರಾಮಗಳಲ್ಲಿ ಪೌಷ್ಟಿಕ ಕೈತೋಟ ನಿರ್ಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶಂಭುಲಿಂಗ ಹಿರೇಮಠ ಸಲಹೆ ಮಾಡಿದರು.

ಬೀದರ್ ತಾಲ್ಲೂಕಿನ ಜನವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಪೋಷಣ ಅಭಿಯಾನ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ರೈತ ಮಹಿಳೆಯರಿಗೆ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಪೌಷ್ಟಿಕ ಆಹಾರ ಸೇವನೆ ಮೂಲಕ ಅಪೌಷ್ಟಿಕತೆಯನ್ನು ಹೋಗಲಾಡಿಸಬಹುದು ಎಂದು ತಿಳಿಸಿದರು.

ಉತ್ತಮ ಆರೋಗ್ಯಕ್ಕಾಗಿ ಆಹಾರದಲ್ಲಿ ಸಿರಿಧಾನ್ಯ ಹಾಗೂ ಸೋಯಾ ಅವರೆ ಹೆಚ್ಚಿನ ಪ್ರಮಾಣದಲ್ಲಿ ಬಳಸಬೇಕು ಎಂದು ಡಾ. ರಾಜೇಶ್ವರಿ ಆರ್. ತಿಳಿಸಿದರು.

ಅಪೌಷ್ಟಿಕತೆ ನಿವಾರಣೆಯಲ್ಲಿ ಬೀದರ್ ಜಿಲ್ಲೆ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಹೇಳಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಶಿಂಧೆ, ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಸುನೀಲ ಕುಲಕರ್ಣಿ ಮಾತನಾಡಿದರು. ಪೋಷಣ ಅಭಿಯಾಣದ ಜಿಲ್ಲಾ ಸಂಯೋಜಕಿ ಅನಿತಾ ಚಿಮಕೋಡೆ, ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ಉಪನ್ಯಾಸ ನೀಡಿದರು.
ಪೌಷ್ಟಿಕ ಕೈತೋಟಕ್ಕೆ ಬೀಜ ವಿತರಿಸಲಾಯಿತು. ಸಿದ್ರಾಮಪ್ಪ ಮಣಿಗೆ, ಸಂಗಮಿತ್ರಾ ಉಪಸ್ಥಿತರಿದ್ದರು. ಡಾ. ಅಕ್ಷಯಕುಮಾರ ಸ್ವಾಗತಿಸಿದರು. ಡಾ.ಆರ್.ಎಲ್. ಜಾಧವ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT