ಮಂಗಳವಾರ, ಜುಲೈ 5, 2022
25 °C

ಬೀದರ್ ದಕ್ಷಿಣದಲ್ಲಿ ಕ್ರೀಡಾಂಗಣ ನಿರ್ಮಿಸಿ: ಶಾಸಕ ಬಂಡೆಪ್ಪ ಕಾಶೆಂಪೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡಾಂಗಣ ನಿರ್ಮಿಸಬೇಕು ಎಂದು ಶಾಸಕ ಬಂಡೆಪ್ಪ ಕಾಶೆಂಪೂರ ಒತ್ತಾಯಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ಅವರು, ಬೀದರ್ ದಕ್ಷಿಣ ಕ್ಷೇತ್ರವು 110 ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯ ಇದೆ ಎಂದು ಹೇಳಿದರು.

25 ರಿಂದ 30 ಎಕರೆ ಜಾಗ ಒದಗಿಸಿಕೊಟ್ಟರೆ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಂಗಣ ನಿರ್ಮಿಸಲು ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಿಕೊಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು