ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಹಕ್ಕು ಪಾಲನೆಯಿಂದ ಸುಂದರ ಸಮಾಜ ನಿರ್ಮಾಣ: ಸತ್ಯನಾರಾಯಣಾಚಾರ್ಯ

Last Updated 11 ಡಿಸೆಂಬರ್ 2021, 13:39 IST
ಅಕ್ಷರ ಗಾತ್ರ

ಬೀದರ್: ಮಾನವ ಹಕ್ಕುಗಳ ಪಾಲನೆಯಿಂದ ಮಾತ್ರ ಸುಸಂಸ್ಕೃತ ಹಾಗೂ ಸುಂದರ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಅಭಿಪ್ರಾಯಪಟ್ಟರು.

ನಗರದ ಚಿದ್ರಿ ರಸ್ತೆಯಲ್ಲಿನ ಕೇಂದ್ರೀಯ ವಿದ್ಯಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಮಾನವ ಹಕ್ಕುಗಳ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಯಾರನ್ನೂ ಗುಲಾಮಗಿರಿ, ದಾಸ್ಯತ್ವದಲ್ಲಿ ಇರಿಸಲಾಗದು. ಎಲ್ಲ ಪ್ರಕಾರದ ಗುಲಾಮಗಿರಿಯನ್ನೂ ನಿಷೇಧಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿದ್ರಾಮ ಟಿ.ಪಿ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕ ಮಾನೂರೆ ಅಧ್ಯಕ್ಷತೆ ವಹಿಸಿದ್ದರು.

ತಿಸ್ರೀ ಆಂಖ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ ರಾಜ್ಯ ಅಧ್ಯಕ್ಷ ಬಸವರಾಜ ಎ, ಉಪಾಧ್ಯಕ್ಷೆ ಸಂಗೀತಾ ಪಾಂಡುರಂಗ, ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯ ಮಿತಿಲೇಶಕುಮಾರ, ಹಿರಿಯ ಸಾಹಿತಿ ಪಾಂಡುರಂಗ ಕೋರೆ ಉಪಸ್ಥಿತರಿದ್ದರು. ಶಿಕ್ಷಕಿ ಸಾವಿತ್ರಿ ನಿರೂಪಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ತಿಸ್ರೀ ಆಂಖ್ ಹ್ಯೂಮನ್ಸ್ ರೈಟ್ಸ್ ಆರ್ಗನೈಸೇಷನ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT