ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟ ಕಾಯ್ದುಕೊಳ್ಳಲು ಸೂಚನೆ

Last Updated 1 ನವೆಂಬರ್ 2019, 16:12 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಣ ನಿರ್ಮಾಣ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಶಾಸಕ ರಾಜಶೇಖರ್ ಪಾಟೀಲ ಸೂಚಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹೆಚ್ಚುವರಿ ಕೋಣೆಗಳ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಕಾಲೇಜಿನ ಅಭಿವೃದ್ದಿ ಕಾಮಗಾರಿಗಳಿಗೆ ಈಗಾಗಲೇ ₹20 ಕೋಟಿ ನೀಡಲಾಗಿದೆ. ಅದರಂತೆ ಕಾಲೇಜಿನಲ್ಲಿ 8 ಹೆಚ್ಚುವರಿ ಕೋಣೆಗಳ ನಿರ್ಮಾಣಕ್ಕಾಗಿ ₹1.28 ಲಕ್ಷ ಬಿಡುಗಡೆಯಾಗಿದೆ. ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಸಿಬ್ಬಂದಿ ಪ್ರತಿನಿತ್ಯ ಕಾಮಗಾರಿ ವೀಕ್ಷಿಸಿ ಗುಣಮಟ್ಟ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಪುರಸಭೆ ಸದಸ್ಯ ಅಪ್ಸರ್‌ಮಿಯ್ಯ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಪ್ರಾಂಶುಪಾಲ ಡಾ.ವೀರಣ್ಣಾ ತುಪ್ಪದ, ಪ್ರಾಧ್ಯಾಪಕ ಡಾ.ಜಯಕುಮಾರ ಸಿಂಧೆ, ಬಿಇಒ ಶಿವರಾಚಪ್ಪ ವಾಲಿ, ಗುತ್ತಿಗೆದಾರ ನಾರಾಯಣರಾವ ಸಿಂಗಾಡೆ. ದತ್ತಕುಮಾರ ಚಿದ್ರಿ, ಸುರೇಶ ಘಾಂಗ್ರೆ ಹಾಗೂ ಮಲ್ಲಿಕಾರ್ಜುನ ಶರ್ಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT