ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಸಾಂಸ್ಕೃತಿಕ ಭಾರತ ನಿರ್ಮಾಣ: ಭಗವಂತ ಖೂಬಾ

ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ
Last Updated 15 ಡಿಸೆಂಬರ್ 2022, 13:28 IST
ಅಕ್ಷರ ಗಾತ್ರ

ಬೀದರ್‌: ‘ಸ್ವಾತಂತ್ರ್ಯ ನಂತರ ಬಿಜೆಪಿ ಸಾಂಸ್ಕೃತಿಕ ಭಾರತ ನಿರ್ಮಾಣ ಮಾಡಿದೆ’ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದರು.

ನಗರದ ನೌಬಾದ್‌ನಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿಜೆಪಿ ನಿರ್ದಿಷ್ಟ ಗುರಿ ಹಾಗೂ ಧ್ಯೇಯದೊಂದಿಗೆ ಜನ ಸಂಘದೊಂದಿಗೆ ಆರಂಭವಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ಇಂದು ಅಧಿಕಾರದಲ್ಲಿ ಇದೆ. ಕಲ್ಲು, ಸಿಮೆಂಟ್‌ನಿಂದ ದೇಶ ಕಟ್ಟಲು ಆಗದು. ರಾಷ್ಟ್ರಪ್ರೇಮ ಹಾಗೂ ಉತ್ತಮ ಕಾರ್ಯಗಳ ಮೂಲಕ ರಾಷ್ಟ್ರ ಕಟ್ಟಬೇಕಾಗಿದೆ’ ಎಂದು ತಿಳಿಸಿದರು.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ಮಾತನಾಡಿ, ‘ರಾಷ್ಟ್ರೀಯ ನಾಯಕರ ಸಂಕಲ್ಪದಿಂದಾಗಿ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತವಾದ ಪಕ್ಷದ ಕಚೇರಿ ನಿರ್ಮಾಣವಾಗಿದೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲಿದೆ’ ಎಂದು ಹೇಳಿದರು.

‘ವಿಶ್ವದಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಪೆಯಿಂದ ಜಿಲ್ಲೆ ಪ್ರಗತಿಯತ್ತ ಸಾಗಲು ಸಾಧ್ಯವಾಗಿದೆ’ ಎಂದು ತಿಳಿಸಿದರು.


ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ , ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿರಾವ್ ಮುಳೆ, ರಾಜ್ಯ ಹಜ್‌ ಕಮಿಟಿ ಅಧ್ಯಕ್ಷ ರೌಫೋದ್ದಿನ್‌ ಕಚೇರಿವಾಲೆ,

ಶಾಸಕ ಶರಣು ಸಲಗರ, ಬುಡಾ ಅಧ್ಯಕ್ಷ ಬಾಬು ವಾಲಿ, ಮಾಜಿ ಶಾಸಕರಾದ ಪ್ರಕಾಶ ಖಂಡ್ರೆ, ಸುಭಾಷ ಕಲ್ಲೂರ, ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ, ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್‌ ಠಾಕೂರ್, ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಬಾಬುರಾವ್ ಮದಕಟ್ಟಿ, ಶಿವರಾಜ ಗಂದಗೆ, ಸೋಮನಾಥ ಪಾಟೀಲ, ಗಂಗಾಧರ ದೇಶಪಾಂಡೆ, ಅರಹಂತ ಸಾವಳೆ, ಬಾಬುರಾವ್‌ ಕಾರಬಾರಿ ಇದ್ದರು. ವಿಜಯಕುಮಾರ ಪಾಟೀಲ ಗಾದಗಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT