ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಬಸ್‌ಗೆ ಬೆಂಕಿ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Published 31 ಅಕ್ಟೋಬರ್ 2023, 14:37 IST
Last Updated 31 ಅಕ್ಟೋಬರ್ 2023, 14:37 IST
ಅಕ್ಷರ ಗಾತ್ರ

ಭಾಲ್ಕಿ: ಗಡಿ ಜಿಲ್ಲೆಯ ಬೀದರ್ ಬಸ್‍ಗೆ ಬೆಂಕಿ ಹಚ್ಚಿ ಉದ್ಧಟತನ ತೋರಿದ ಕಿಡಿಗೇಡಿಗಳನ್ನು ಬಂಧಿಸಲು ತಾಲ್ಲೂಕು ಕರವೇ ಅಧ್ಯಕ್ಷ ಗಣೇಶ ಪಾಟೀಲ ಒತ್ತಾಯಿಸಿದ್ದಾರೆ.

ಭಾಲ್ಕಿಯಿಂದ ಮಹರಾಷ್ಟ್ರದ ಪುಣೆಗೆ ಹೊರಟಿಸಿದ್ದ ಕೆ.ಎ.38 ಎಫ್.1201 ಸಂಖ್ಯೆಯ ಬಸ್‍ನ್ನು ಕಿಡಿಗೇಡಿಗಳು ಮಹಾರಾಷ್ಟ್ರದ ಉಮರ್ಗಾ ಸಮೀಪ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಿ ಗಡಿಯಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಇಂತಹ ಘಟನೆಗಳು ಪದೇಪದೇ ನಡೆಯುತ್ತಲೇ ಇವೆ. ಕೂಡಲೇ ಅಲ್ಲಿನ ಸರ್ಕಾರ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಬಸ್ ಸಂಚಾರ ಸ್ಥಗಿತ: ಭಾಲ್ಕಿ ಡಿಪೊದ ಬಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ ಸುಮಾರು 20 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಡಿಪೊ ವ್ಯವಸ್ಥಾಪಕ ಭದ್ರಪ್ಪಾ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT