ಕಮಠಾಣ(ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಅಂತರ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಬೀದರ್ನ ಬಿ.ವಿ. ಭೂಮರಡ್ಡಿ ಕಾಲೇಜು ಗೆದ್ದುಕೊಂಡಿದೆ.

ಪ್ರತ್ಯೇಕ ಪುರುಷರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಬಿ.ವಿ. ಭೂಮರಡ್ಡಿ ಕಾಲೇಜು ಬಾಚಿಕೊಂಡರೆ, ಪ್ರತ್ಯೇಕ ಮಹಿಳಾ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಭಾಲ್ಕಿಯ ಸಿ.ಬಿ. ಕಾಲೇಜು ತನ್ನದಾಗಿಸಿಕೊಂಡಿತು.

ಪುರುಷರ ವೈಯಕ್ತಿಕ ವಿಭಾಗದಲ್ಲಿ ಚಿಟಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೀತಮ್ ಹಾಗೂ ಮಹಿಳಾ ವೈಯಕ್ತಿಕ ವಿಭಾಗದಲ್ಲಿ ಬಿ.ವಿ. ಭೂಮರಡ್ಡಿ ಕಾಲೇಜಿನ ಭುವನೇಶ್ವರಿ ಚಾಂಪಿಯನ್ ಪ್ರಶಸ್ತಿಗೆ ಭಾಜನರಾದರು.

ಚಿಟಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೀತಮ್ ಪುರುಷರ ವಿಭಾಗದಲ್ಲಿ ಅತಿ ವೇಗದ ಓಟಗಾರ ಹಾಗೂ ಬಿ.ವಿ. ಭೂಮರಡ್ಡಿ ಕಾಲೇಜಿನ ಭುವನೇಶ್ವರಿ ಮಹಿಳಾ ವಿಭಾಗದಲ್ಲಿ ಅತಿ ವೇಗದ ಓಟಗಾರ್ತಿಯಾಗಿ ಹೊರ ಹೊಮ್ಮಿದರು.

ಪ್ರಶಸ್ತಿ ಪ್ರದಾನ: ಗುರುವಾರ ಸಂಜೆ ನಡೆದ ಕೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಮಗ್ರ ಪ್ರಶಸ್ತಿ, ಗುಂಪು ಹಾಗೂ ವೈಯಕ್ತಿಕ ವಿಭಾಗದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಮಾತನಾಡಿ, ಕ್ರೀಡೆಗಳು ಶಿಸ್ತು, ನಾಯಕತ್ವ ಹಾಗೂ ಆರೋಗ್ಯಕರ ಜೀವನ ಶೈಲಿ ರೂಢಿಸಿಕೊಳ್ಳಲು ನೆರವಾಗುತ್ತವೆ. ವಿಶ್ವವಿದ್ಯಾಲಯ ಬರುವ ದಿನಗಳಲ್ಲಿ ಕ್ರೀಡೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹೇಳಿದರು.

ಕರ್ನಾಟಕ ಪಶು ವೈದ್ಯಕೀಯ ವಿಶ್ವವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ. ರಾಮಚಂದ್ರ ನಾಯಕ್, ಪಶು ವೈದ್ಯಕೀಯ ಕಾಲೇಜು ಡೀನ್ ಡಾ. ಎಂ.ಕೆ. ತಾಂದಳೆ, ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಅಬ್ದುಲ್ ಸತ್ತಾರ್, ಕುಲಸಚಿವ ಪ್ರೊ. ಪರಮೇಶ್ವರ್ ನಾಯ್ಕ್, ಕ್ರೀಡಾ ಆಯೋಜನೆ ಸಮಿತಿಯ ಕಾರ್ಯದರ್ಶಿ ಓಂಕಾರ ಮಾಶೆಟ್ಟಿ, ಎನ್.ಎಸ್. ಕುಲಕರ್ಣಿ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.