ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆ: ಮತಯಂತ್ರಗಳ ಸಿದ್ಧತೆ

ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ಇವಿಎಂ ರ್‍ಯಾಂಡ್‌ಮೈಜೇಷನ್‌
Last Updated 5 ಏಪ್ರಿಲ್ 2021, 14:31 IST
ಅಕ್ಷರ ಗಾತ್ರ

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಯುಕ್ತ ಮತ ಯಂತ್ರಗಳ ಎರಡನೇ ಹಂತದ ರ್‍ಯಾಂಡ್‌ಮೈಜೇಷನ್ ಪ್ರಕ್ರಿಯೆ ಸಾಮಾನ್ಯ ಚುನಾವಣಾ ವೀಕ್ಷಕ ಅಲೋಕ್ ಗುಪ್ತ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕಚೇರಿಯ ವಿಡಿಯೊ ಸಂವಾದ ಸಭಾಂಗಣದಲ್ಲಿ ನಡೆಯಿತು.

ಉಪ ಚುನಾವಣೆಯಲ್ಲಿ 264 ಮತಗಟ್ಟೆಗಳು ಹಾಗೂ ಹೆಚ್ಚುವರಿ 62 ಮತಗಟ್ಟೆಗಳು ಸೇರಿ ಒಟ್ಟು 326 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಯಾವ ಮತಗಟ್ಟೆಗೆ ಯಾವ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯುನಿಟ್, ವಿವಿಪ್ಯಾಟ್ ಅಳವಡಿಸಬೇಕು ಎನ್ನುವ ಪ್ರಕ್ರಿಯೆಯನ್ನು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಉಪಸ್ಥಿತಿಯಲ್ಲಿ ನಡೆಸಲಾಯಿತು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ‘ರ್‍ಯಾಂಡ್‌ಮೈಜೇಷನ್ ಬಳಿಕ ತೆಗೆದುಕೊಂಡ ಪ್ರತಿಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರಿಂದ ಅನುಮೋದನೆ ಸಿಕ್ಕಿದೆ. ನೋಂದಾಯಿತ ರಾಜಕೀಯ ಪಕ್ಷಗಳಿಗೆ ಇದನ್ನು ತಲುಪಿಸಿದ ಬಗ್ಗೆ ಸ್ವೀಕೃತಿ ಪ್ರತಿಗಳನ್ನು ಪಡೆದು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು’ ಎಂದು ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ನಾಗಯ್ಯ ಹಿರೇಮಠ ಅವರಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಚುನಾವಣಾ ವಿಭಾಗದ ತಹಶೀಲ್ದಾರ್ ಶಾಂತನು ಪೂರಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT