ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ರದ್ದು

Last Updated 20 ಏಪ್ರಿಲ್ 2021, 3:14 IST
ಅಕ್ಷರ ಗಾತ್ರ

ಭಾಲ್ಕಿ: ಇಲ್ಲಿನ ಚನ್ನಬಸವಾಶ್ರಮ ದಲ್ಲಿ ಏ.22ರಂದು ನಡೆಯಬೇಕಿದ್ದ ಡಾ.ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ ಮತ್ತು ವಚನಜಾತ್ರೆ-2021 ಅನ್ನು ರದ್ದುಪಡಿಸ ಲಾಗಿದೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದ್ದಾರೆ.

ಯುವಜನಾಂಗಕ್ಕೆ ಡಾ.ಚನ್ನಬಸವ ಪಟ್ಟದ್ದೇವರ ಜೀವನ, ಸಾಧನೆ ಪರಿಚಯಿಸುವ ನಿಟ್ಟಿನಲ್ಲಿ ಕಳೆದ 20 ವರ್ಷಗಳಿಂದ ಪಟ್ಟದ್ದೇವರ ಸ್ಮರಣೋತ್ಸವವನ್ನು ಶ್ರೀಮಠದ ವತಿಯಿಂದ ಅದ್ಧೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ವರ್ಷ ಕೋವಿಡ್-19 ಪ್ರಯುಕ್ತ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಈಚೆಗೆ ಭಕ್ತರ ಪೂರ್ವಭಾವಿ ಸಭೆ ಕರೆದು ಸರಳ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ ಕಾರಣ ಸ್ಮರಣೋತ್ಸವ ರದ್ದುಪಡಿಸ ಲಾಗಿದೆ. ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸ್ಮರಣೋತ್ಸವ ದಿನದಂದು ಭಕ್ತರು ತಮ್ಮ ಮನೆಗಳಲ್ಲಿ ಪಟ್ಟದ್ದೇವರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಗೌರವ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT