ಮಂಗಳವಾರ, ಫೆಬ್ರವರಿ 25, 2020
19 °C

ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು: ಮಹಿಳೆ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಿಟಗುಪ್ಪ (ಬೀದರ್ ಜಿಲ್ಲೆ):  ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ತೆರಳುತ್ತಿದ ಕಾರಿಗೆ ಬೆಂಕಿಹೊತ್ತಿಕೊಂಡು, ಕಾರಿನಲ್ಲಿದ ಮಹಿಳೆಯೊಬ್ಬರು ಸಜೀವ ದಹನಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಹಿಳೆಯ ಪತಿ ಹಾಗೂ ಪುತ್ರ ಆಶ್ಚರ್ಯಕರ ರೀತಿಯಲ್ಲಿ ಪಾರಾರಿದ್ದಾರೆ.

ಹೈದರಾಬಾದ್‌ನ ಕಲ್ಯಾಣಿ ಉದಯಕುಮಾರ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಯಾಣಿಯ ಪತಿ ಉದಯಕುಮಾರ ಹಾಗೂ ಪುತ್ರ ಗಗನಕುಮಾರ ಉದಯಕುಮಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಮಹಾರಾಷ್ಟ್ರದ ಉದಗಿರನ ಖಾಸಗಿ ಆಸ್ಪತ್ರೆಗೆ ಹೋಗಿ ಹೈದರಾಬಾದ್‌ಗೆ ಮರಳುತ್ತಿದ್ದಾಗ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖ್ಖೆಳ್ಳಿ ಹೊರವಲಯದಲ್ಲಿ  ಅವಘಡ ಸಂಭವಿಸಿದೆ. 

ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು