ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯ, ಶ್ವಾಸಕೋಶ ಪ್ರಚೋದಕ ತರಬೇತಿ

ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜು
Last Updated 15 ಅಕ್ಟೋಬರ್ 2022, 14:19 IST
ಅಕ್ಷರ ಗಾತ್ರ

ಬೀದರ್‌: ಹೃದಯ ಮತ್ತು ಶ್ವಾಸಕೋಶ ಪ್ರಚೋದಕ (ಸಿಪಿಆರ್) ಕುರಿತ ತರಬೇತಿ ಕಾರ್ಯಕ್ರಮ ತಾಲ್ಲೂಕಿನ ಗೋರನಳ್ಳಿ ಸಮೀಪದ ಲಿಂಗರಾಜ ಅಪ್ಪ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.
ಕಾಲೇಜು ನಿರ್ದೇಶಕಿ ಡಾ. ಉಮಾ ದೇಶಮುಖ ಅವರು, ಶರಣಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಡಿಯಾಕ್ ಅಟ್ಯಾಕ್ ಆಗಿ ಯಾರಾದರೂ ಪ್ರಜ್ಞೆ ತಪ್ಪಿ ಬಿದ್ದಲ್ಲಿ ಅವರನ್ನು ಹೇಗೆ ರಕ್ಷಿಸಬೇಕು, ಏನೇನು ಪ್ರಥಮ ಚಿಕಿತ್ಸೆ ಕೊಡಬೇಕು. ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವುದನ್ನು ವಿವರಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶರಣಬಸವಪ್ಪ ಅಪ್ಪ, ಡಾ. ದಾಕ್ಷಾಯಣಿ ತಾಯಿ, ಚಿರಂಜೀವಿ ದೊಡ್ಡಪ್ಪ ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ನಿರ್ದೇಶಕ ಶರಣಬಸಪ್ಪ ದೇಶಮುಖ ಅವರ ಪ್ರೋತ್ಸಾಹದಿಂದಾಗಿ ಕಾಲೇಜಿನಲ್ಲಿ ನಿರಂತರ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ ವರ್ಧಿಸುವ ಚಟುವಟಿಕೆಗಳು ನಡೆದಿವೆ ಎಂದು ತಿಳಿಸಿದರು.
ಕಾಲೇಜು ಪ್ರಾಚಾರ್ಯೆ ಡಾ. ವಿನಿತಾ ಪಾಟೀಲ, ಇಂಡಿಯನ್ ಮೆಡಿಕಲ್ ಅಸೊಸಿಯೇಷನ್ ಸ್ಥಳೀಯ ಘಟಕದ ಅಧ್ಯಕ್ಷ ಡಾ. ಮದನಾ ವೈಜಿನಾಥ, ಉಪಾಧ್ಯಕ್ಷ ಡಾ. ಸಂಜಯ್ ಚಂದಾ, ಡಾ. ಸಂಗಮೇಶ ಕುಣಕೇರಿ, ಬ್ರಿಮ್ಸ್ ಅರಿವಳಿಕೆ ವಿಭಾಗದ ಡಾ. ಸುಭೋದ್ ಕಾಮತಿಕರ್, ಡಾ. ಮಲ್ಲಿಕಾರ್ಜುನ ಪನಶೆಟ್ಟಿ, ಡಾ. ರಾಜಕುಮಾರ, ಡಾ. ದೀಪಕ್, ಡಾ. ಅಜಯ್ ಪಾಟೀಲ ಇದ್ದರು.


ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಬೀದರ್ ಘಟಕ, ಬ್ರಿಮ್ಸ್ ಅರಿವಳಿಕೆ ವಿಭಾಗ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT