ಭಾನುವಾರ, ಸೆಪ್ಟೆಂಬರ್ 19, 2021
24 °C
ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಕ್ರಮ

ಸಂಶೋಧನಾ ಆಸಕ್ತಿ ಬೆಳೆಸಿಕೊಳ್ಳಿ: ಅಜಿಜ್ ಖಾನ್ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ವಿದ್ಯಾರ್ಥಿಗಳು ಸಂಶೋಧನಾ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಇಂಡಿಯನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಜಿಜ್ ಖಾನ್ ಸಲಹೆ ಮಾಡಿದರು.

ಇಲ್ಲಿಯ ಚಿದ್ರಿಯಲ್ಲಿ ಇರುವ ಇಂಡಿಯನ್ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯ ಕ್ರಮ ಉದ್ಘಾಟಿಸಿ, ಮಾತನಾಡಿದರು.

ಸಂಶೋಧನೆ ಕೈಗೊಳ್ಳಲು ಬಹಳಷ್ಟು ವಿಷಯಗಳು ಇವೆ. ಜೀವನದ ಗುರಿ ಸ್ಪಷ್ಟವಾಗಿ ಇರಬೇಕು. ಅದಕ್ಕೆ ತಕ್ಕ ಪರಿಶ್ರಮವನ್ನೂ ವಹಿಸಬೇಕು. ಅಂದಾಗ ಮಾತ್ರ ಗುರಿ ತಲುಪಲು ಸಾಧ್ಯವಿದೆ ಎಂದು ಹೇಳಿದರು.

ನರ್ಸಿಂಗ್ ಕಾಲೇಜು ಪ್ರಾಚಾರ್ಯ ಫ್ರಾಂಕ್ಲಿನ್ ಕ್ಯಾಂಟಿಲ್, ಜಾಸ್ಮಿನ್ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಅಜೀಮ್ ಇದ್ದರು. ಉಪನ್ಯಾಸಕ ಸುನೀಲ್ ಮಾಳಗೆ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು