ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವತಿ ಹತ್ಯೆ ಖಂಡಿಸಿದ್ದ ಪ್ರತಿಭಟನಾಕಾರರ ಮೇಲಿನ ಪ್ರಕರಣ ವಾಪಸ್: ವಿಜಯೋತ್ಸವ

Last Updated 30 ಮಾರ್ಚ್ 2023, 13:52 IST
ಅಕ್ಷರ ಗಾತ್ರ

ಬೀದರ್: ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮದ ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಹಿಂದು ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ದಾಖಲಿಸಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದಕ್ಕೆ ವೇದಿಕೆ ಕಾರ್ಯಕರ್ತರು ನಗರದಲ್ಲಿ ಗುರುವಾರ ವಿಜಯೋತ್ಸವ ಆಚರಿಸಿದರು.

ಹಿಂದು ಹಿತರಕ್ಷಣಾ ವೇದಿಕೆ ಸಂಚಾಲಕ ವಿಜಯಕುಮಾರ ಎಸ್. ಪಾಟೀಲ ಗಾದಗಿ ನೇತೃತ್ವದಲ್ಲಿ ಶಿವಾಜಿ ವೃತ್ತದಲ್ಲಿ ಸೇರಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಅಮಾಯಕರ ವಿರುದ್ಧದ ಪ್ರಕರಣ ವಾಪಸ್ ಪಡೆದಿದ್ದಕ್ಕೆ ರಾಜ್ಯ ಸರ್ಕಾರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್, ಜಿಲ್ಲೆಯ ಮುಖಂಡರು, ಸಂಘ- ಪರಿವಾರದ ಪ್ರಮುಖರಿಗೆ ಕೃತಜ್ಞತೆ ಸಲ್ಲಿಸಿದರು.

2018 ರಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ನಡೆಸಿದ್ದ ಪ್ರತಿಭಟನೆ ವೇಳೆ ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಅಮಾಯಕ ಹಿಂದು ಹಿತರಕ್ಷಣಾ ಸಮಿತಿಯ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಕೊನೆಗೂ ಸತ್ಯಕ್ಕೆ ಜಯ ದೊರೆತಿದೆ. ಅಮಾಯಕರ ಮೇಲಿನ ಪ್ರಕರಣ ಸರ್ಕಾರ ಹಿಂಪಡೆದಿದ್ದಕ್ಕೆ ಸಂತಸವಾಗಿದೆ ಎಂದು ವಿಜಯಕುಮಾರ ಎಸ್. ಪಾಟೀಲ ಗಾದಗಿ ತಿಳಿಸಿದರು.

ಪ್ರಕರಣ ವಾಪಸ್ ಸೂಕ್ತ: ಭಾಲ್ಕಿ ತಾಲ್ಲೂಕಿನ ಕೋಸಂ ಗ್ರಾಮದ ಯುವತಿ ಹತ್ಯೆ ವಿರೋಧಿಸಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ಸೂಕ್ತವಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.

ಹತ್ಯೆ ಪ್ರಕರಣ ಖಂಡಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಕಾರ್ಯಕರ್ತರ ವಿರುದ್ಧ ನಗರದ ಮಾರ್ಕೆಟ್ ಠಾಣೆ ಹಾಗೂ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಅಮಾಯಕ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರವನ್ನು ಹಲವು ಬಾರಿ ಕೋರಲಾಗಿತ್ತು. ಮುಖ್ಯಮಂತ್ರಿಯವರು ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT