ಬೀದರ್: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ (ಕೆ) ಗ್ರಾಮ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ಗಂಭೀರ ಸ್ವರೂಪದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಐದು ಜನ ಮಹಿಳಾ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿದ್ದರು. ಆ ಸಮಿತಿ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಅದನ್ನು ಆಧರಿಸಿ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರು. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಸಂಬಂಧ ಪ್ರಾಂಶುಪಾಲರ ವಿರುದ್ಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸದಾಶಿವ ಬಡಿಗೇರ್ ಅವರಿಗೆ ಕೈಬರಹದಲ್ಲಿ ಪತ್ರ ಬರೆದು ದೂರು ಸಲ್ಲಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.