ಹುಲಸೂರ (ಬೀದರ್ ಜಿಲ್ಲೆ): ಶ್ರೀರಾಮಚಂದ್ರನ ಅವಹೇಳನ ಮಾಡಿದ ಆರೋಪದ ಮೇರೆಗೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಇಲ್ಲಿನ ಅಟ್ಟರಗಾ ಗ್ರಾಮದ ಕಾಳಿದಾಸ್ ಅರ್ಜುನರಾವ್ ಸೂರ್ಯವಂಶಿ ಹಾಗೂ ರಾಹುಲ್ ವಿ. ಖಂಡಾರೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಕಲಂ 299, 196 ಮತ್ತು 353ರ ಅಡಿ ಪ್ರಕರಣ ದಾಖಲಾಗಿದೆ.

ಧಾರ್ಮಿಕ ಭಾವನೆಗಳನ್ನು ಅವಮಾನಿಸಿ, ಸಮಾಜದಲ್ಲಿ ದ್ವೇಷ ಉಂಟು ಮಾಡಿದ ಆರೋಪಗಳಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಳಿದಾಸ್ ಅರ್ಜುನರಾವ್ ಸೂರ್ಯವಂಶಿ ಎಂಬಾತ ಮರಾಠಿ ಭಾಷೆಯಲ್ಲಿ ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮ ಗಾಂಧೀಜಿ ಕುರಿತು ಅವಹೇಳನಕಾರಿ ಪದಗಳನ್ನು ಬಳಸಿ ಕಾಳಿದಾಸ್ ಆಡಿದ ಮಾತುಗಳನ್ನು ರಾಹುಲ್ ವಿ. ಖಂಡಾರೆ ಅವರು ಮೊಬೈಲ್ನಲ್ಲಿ ಚಿತ್ರೀಕರಿಸಿ, ಬಳಿಕ ಅದನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದರು. ಆನಂತರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡಿ, ಸಾಕಷ್ಟು ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು.

ಬುಧವಾರ (ಫೆ. 11) ತಡರಾತ್ರಿವರೆಗೆ ಹಿಂದೂಪರ ಸಂಘಟನೆಗಳು ಮೆಹಕರ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ವಿಡಿಯೋ ನೈಜತೆ ಹಾಗೂ ಘಟನೆಯ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.