ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Last Updated 23 ಅಕ್ಟೋಬರ್ 2021, 14:41 IST
ಅಕ್ಷರ ಗಾತ್ರ

ಬೀದರ್: ನಗರದ ಕಿತ್ತೂರು ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಣಿ ಚೆನ್ನಮ್ಮ ಜಯಂತ್ಯುತ್ಸವ
ಆಚರಿಸಲಾಯಿತು

ಡಾಕ್ಟರ್ ಆನಂದ್ ರಾವ್ ಚಾರಿಟಬಲ್ ಟ್ರಸ್ಟ್, ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್, ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟ, ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಕೇರ್ ಸಂಸ್ಥೆಯ ಅಧ್ಯಕ್ಷ ಡಾ.ಆನಂದರಾವ್ ಮಾತನಾಡಿ. ‘ಮಹಿಳೆಯರು ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ಹಾಗೂ ಪರಾಕ್ರಮವನ್ನು ಮೈಗೂಡಿಸಿಕೊಳ್ಳಬೇಕು’ ಎಂದರು.


ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಸಂಜೀವಕುಮಾರ ಸ್ವಾಮಿ, ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ಸದಸ್ಯ ವೀರಭದ್ರಪ್ಪ ಉಪ್ಪಿನ್ ಮಾತನಾಡಿದರು. ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆ ಅರವಿಂದ ಕುಲಕರ್ಣಿ ಸ್ವರಚಿತ ಕವನ ವಾಚನ ಮಾಡಿದರು.

ಮುಖ್ಯ ಶಿಕ್ಷಕಿ ಪಾರ್ವತಿ ಲಕ್ಷ್ಮಮಾಜಿ ಅಧ್ಯಕ್ಷತೆ ವಹಿಸಿದ್ದರು. ಮಂದಾಕಿನಿ ಉಪ್ಪಿನ್, ಮಾಲಾಶ್ರೀ ಹೆಡಗಾಪುರ, ಈರಮ್ಮ, ಲಕ್ಷ್ಮಿ ಇದ್ದರು. ಮಾಲಾಶ್ರೀ ಸ್ವಾಗತಿಸಿದರು. ಶಿಕ್ಷಕ ಸಂಗ್ರಾಮ ಚಾಮ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT