ಬೀದರ್: ‘ಸಂತರು ಹಾಗೂ ಮಹಾ ಪುರುಷರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಅವರ ಸೇವೆಯನ್ನು ಸ್ಮರಿಸಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾ ಪುರುಷರು ಸ್ವಾರ್ಥವನ್ನು ಬದಿಗೊತ್ತಿ ಸಮಾಜದ ಒಳಿತಾಗಿ ಬದುಕು ಸವಿಸಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಸವರಾಜ ಪವಾರ ಹಾಗೂ ಬಂಜಾರಾ ಸಮಾಜದ ಮುಖಂಡರು ಇದ್ದರು.

ಜಿಲ್ಲಾ ಪಂಚಾಯಿತಿ ಕಚೇರಿ: ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮಾನೆಗೋಪಾಳೆ ಹಾಗೂ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ, ಉಪ ಕಾರ್ಯದರ್ಶಿ ಸೂರ್ಯಕಾಂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.