ಬೀದರ್: ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ನಿರ್ದೇಶಕ ಡಾ.ಕೆ.ಮನೋಹರ, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ.ತಿವಾರಿ, ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಅಧಿಕಾರಿ ಎಸ್.ಜಗದೀಶ ಅವರನ್ನೊಳಗೊಂಡ ಕೇಂದ್ರದ ತಂಡ ಬುಧವಾರ ( ಸೆ.7) ಬೀದರ್ಗೆ ಭೇಟಿ ಕೊಡಲಿದೆ.

ಬುಧವಾರ ಸಂಜೆ 4.30ಕ್ಕೆ ವಿಮಾನ ನಿಲ್ದಾಣದಿಂದ ಆದರ್ಶ ಕಾಲೊನಿಯ ರಸ್ತೆ ವೀಕ್ಷಣೆ ಮಾಡುವರು. 4.55ಕ್ಕೆ ಹೊನ್ನಕೇರಿ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಮನೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುವರು. 5.20ಕ್ಕೆ ಕಮಲನಗರ ತಾಲ್ಲೂಕಿನ ಹೊಳಸಮುದ್ರ, 5.30ಕ್ಕೆ ಸಾವಲಿ, 6.15ಕ್ಕೆ ಭಾಲ್ಕಿ ತಾಲ್ಲೂಕಿನ ತಲವಾಡ (ಎಂ) ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸುವರು.

ಸಂಜೆ 6.30ಕ್ಕೆ ಭಾಲ್ಕಿಯ ಪುರಸಭೆ ಕಚೇರಿಗೆ ಭೇಟಿ ನೀಡಿ ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುವರು. 7.30ಕ್ಕೆ ಹೊನ್ನಕೇರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಸೆ. 8ರಂದು ಬೆಳಿಗ್ಗೆ 9.30ಕ್ಕೆ ಹೊನ್ನಕೇರಿಯಿಂದ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.