ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇಂದ್ರದ ಯೋಜನೆಗಳು ಮನೆ ಮನೆ ತಲುಪಲಿ: ಚಂದ್ರಶೇಖರ ಪಾಟೀಲ

Published 7 ಮಾರ್ಚ್ 2024, 15:38 IST
Last Updated 7 ಮಾರ್ಚ್ 2024, 15:38 IST
ಅಕ್ಷರ ಗಾತ್ರ

ಬೀದರ್: ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳನ್ನು ಮನೆಮನೆಗೆ ಮುಟ್ಟಿಸುವ ಕಾರ್ಯವನ್ನು ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮಾಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕು' ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಯುವ ಮೋರ್ಚಾದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು’ ಎಂದು ಅವರು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ, ಶಿವಕುಮಾರ ಸ್ವಾಮಿ, ಜನಾರ್ಧನ ರೆಡ್ಡಿ, ಸಚ್ಚಿದಾನಂದ ಚಿದ್ರಿ, ದಿನೇಶ ಮೂಲಗೆ ಹಾಗೂ ಜಿಲ್ಲಾ ಮೋರ್ಚಾದ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT