ಬುಧವಾರ, ಆಗಸ್ಟ್ 4, 2021
24 °C
ದಲಿತ ಸಂಘಟನೆಗಳ ಪ್ರತಿಭಟನೆ

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಜ್ಯ ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಪದಾಧಿಕಾರಿಗಳು ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ರಾಜ್ಯ ಸರ್ಕಾರ, ಭೂ ರಹಿತ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ಭೂಮಿ ನೀಡಲು ಇರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ಅಧಿನಿಯಮ 1961 ಮತ್ತು 1974 ಅನ್ನು ಅನುಷ್ಠಾನಗೊಳಿಸದೆ, ಬಂಡವಾಳ ಶಾಹಿ, ಅಧಿಕಾರ ಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಗೆ ಭೂಮಿ ನೀಡಲು ಕಾಯ್ದೆಗೆ ತಿದ್ದಪಡಿ ತರಲು ಹೊರಟಿದೆ. ಕಾಯ್ದೆ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ದಲಿತ ಸಂಘರ್ಷ ಸಮಿತಿ (ಭೀಮವಾದ)ಯ ಜಿಲ್ಲಾ ಸಂಚಾಲಕ ಕಲ್ಯಾಣರಾವ್ ಭೊಸ್ಲೆ, ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಚಿಟ್ಟಾ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಅರುಣ ಕುದರೆ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್, ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಪತರಾವ್ ದೀನೆ, ಅಂಬೇಡ್ಕರ್ ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ. ಮುದಾಳೆ, ನಾಗೇಂದ್ರ ಎಸ್. ದಂಡೆ, ರವಿಕುಮಾರ ವಾಘಮಾರೆ, ಓಂಪ್ರಕಾಶ ಭಾವಿಕಟ್ಟಿ, ಶಿವಕುಮಾರ ನೀಲಿಕಟ್ಟಿ, ಅಂಬಾದಾಸ ಗಾಯಕವಾಡ, ಬಾಬುರಾವ್ ಕೌಠಾ, ಶಾಲಿವಾನ ಬಡಿಗೇರ, ಬಾಬುರಾವ್ ಮಿಠಾರೆ, ಅಭಿ ಕಾಳೆ, ಲಕ್ಷ್ಮಿ ಕಾಂಬಳೆ, ಪ್ರಶಾಂತ ಭಾವಿಕಟ್ಟಿ, ಜೀವನ ಬುಡ್ತಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.