ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನು ಬಳಿಗಾರಗೆ ‘ಶ್ರೀಚೆನ್ನರೇಣುಕಬಸವ ಪ್ರಶಸ್ತಿ’

Published 8 ಅಕ್ಟೋಬರ್ 2023, 23:20 IST
Last Updated 8 ಅಕ್ಟೋಬರ್ 2023, 23:20 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ ಅವರಿಗೆ ತಾಲ್ಲೂಕಿನ ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ ‘ಶ್ರೀಚೆನ್ನರೇಣುಕಬಸವ ಪ್ರಶಸ್ತಿ’ ಘೋಷಿಸಲಾಗಿದೆ.

ಪ್ರಶಸ್ತಿ ₹1 ಲಕ್ಷ ನಗದು, 20 ಗ್ರಾಂ ಚಿನ್ನದ ಪದಕ ಒಳಗೊಂಡಿದೆ. ಗದಗ ಜಿಲ್ಲೆಯವರಾದ ಮನು ಬಳಿಗಾರ ವಿವಿಧ ಪ್ರಕಾರದ ಸಾಹಿತ್ಯ ರಚಿಸಿದ್ದಾರೆ.

‘ಅ.23ರಂದು ಮಠದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಪೀಠಾಧಿಪತಿ ಚನ್ನವೀರ ಶಿವಾಚಾರ್ಯರು ತಿಳಿಸಿದ್ದಾರೆ. 11 ವರ್ಷಗಳಿಂದ ಸಂಸ್ಥಾನ ವಿವಿಧ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT