ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Last Updated 23 ಜೂನ್ 2018, 12:17 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ಕಲವಾಡಿ ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ಪಾಲಕರ ಮನವೊಲಿಸಿ ತಡೆಯುವಲ್ಲಿ ಯಶಸ್ವಿಯಾದರು. ಕಲವಾಡಿ ಗ್ರಾಮದ ಬಾಲಕಿಯ ವಿವಾಹ ಬಸವಕಲ್ಯಾಣ ತಾಲ್ಲೂಕಿನ ಹುಲಗುತ್ತಿ ಗ್ರಾಮದ ಯುವಕನ ಜೊತೆ ನಡೆಯುವುದಿತ್ತು.

‘ಬಾಲ್ಯ ವಿವಾಹ ನೆರವೇರಿಸುವುದು ಕಾನೂನಾತ್ಮಕ ಅಪರಾಧ’ ಎಂದು ಬಾಲಕಿ ಮತ್ತು ಯುವಕನ ಪೋಷಕರಿಗೆ ಅಧಿಕಾರಿಗಳು ತಿಳಿ ಹೇಳಿದರು. ‘ಬಾಲ್ಯವಿವಾಹ ಮಾಡುವುದಿಲ್ಲ’ ಎಂಬ ಮುಚ್ಚಳಿಕೆ ಪತ್ರವನ್ನು ಪಡೆದುಕೊಂಡರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಬಸಪ್ಪ ಬೆಳಗುಪ್ಪಿ, ಪೊಲೀಸ್ ಪೇದೆಗಳಾದ ಲತಾ, ನಾಗಪ್ಪಾ, ಮಕ್ಕಳ ಸಹಾಯವಾಣಿ ಕೇಂದ್ರದ ಸಂದೀಪ ದೇವಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT