ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ | ಬಾಲ್ಯ ವಿವಾಹ ಪ್ರಕರಣ: ಶಿಕ್ಷಕ ಅಮಾನತು

Published 21 ಆಗಸ್ಟ್ 2023, 15:41 IST
Last Updated 21 ಆಗಸ್ಟ್ 2023, 15:41 IST
ಅಕ್ಷರ ಗಾತ್ರ

ಭಾಲ್ಕಿ (ಬೀದರ್ ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆ ಶಿಕ್ಷಕನ ಮೇಲೆ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಮದುವೆಯಾದ ಪ್ರಕರಣ ಮೆಹಕರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಶಿಕ್ಷಕನನ್ನು ಅಮಾನತುಗೊಳಿಸಿ ಡಿಡಿಪಿಐ ಸಲೀಂ ಪಾಶಾ ಸೋಮವಾರ ಆದೇಶಿಸಿದ್ದಾರೆ.

ಶಿಕ್ಷಕನ ಕರ್ತವ್ಯಲೋಪ, ದುರ್ನಡತೆಯಿಂದ ಶಿಕ್ಷಣ ಇಲಾಖೆ ಮುಜುಗರಕ್ಕೆ ಒಳಗಾಗಿದೆ. ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಾವಳಿ 1957ರ ನಿಯಮಗಳನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅದೇ ಗ್ರಾಮದ ಪ್ರೌಢಶಾಲೆಯ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT