ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ವ್ಯಕ್ತಿತ್ವ ನಿರ್ಮಾಣ: ಶಿಕ್ಷಕರ ಪಾತ್ರ ಮುಖ್ಯ

Last Updated 23 ಸೆಪ್ಟೆಂಬರ್ 2021, 14:57 IST
ಅಕ್ಷರ ಗಾತ್ರ

ಬೀದರ್: ಶಾಲಾ ಹಂತದಲ್ಲೇ ಮಕ್ಕಳ ಆರೋಗ್ಯಪೂರ್ಣ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ಸ್ಥಳೀಯ ಶಾಖೆ ಅಧ್ಯಕ್ಷೆ ಡಾ. ಆರತಿ ರಘು ಅಭಿಪ್ರಾಯಪಟ್ಟರು.

ಇಲ್ಲಿಯ ಭಾರತೀಯ ಕುಟುಂಬ ಯೋಜನಾ ಸಂಘ (ಎಫ್‍ಪಿಎಐ)ದ ಕಚೇರಿಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹದಿಹರೆಯದವರ ಆರೋಗ್ಯ ಶಿಕ್ಷಣ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹದಿಹರೆಯದವರ ದೈಹಿಕ, ಮಾನಸಿಕ ಬೆಳವಣಿಗೆ, ರಕ್ತ ಹೀನತೆ, ಪೌಷ್ಟಿಕ ಆಹಾರದ ಮಹತ್ವದ ಕುರಿತು ಸಚಿತ್ರ ಮಾಹಿತಿ ನೀಡಿದರು.

ಶಾಖೆ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಅವರು, ಸಂಘದಿಂದ ಹದಿಹರೆಯದವರ ಲೈಂಗಿಕ ಸಂತಾನೋತ್ಪತ್ತಿ ಆರೋಗ್ಯ ಕುರಿತು ಶಾಲಾ, ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಆರೋಗ್ಯ ತಪಾಸಣಾ ಶಿಬಿರಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮನೋರೋಗ ತಜ್ಞ ಡಾ. ರಾಘವೇಂದ್ರ ವಾಘಲೆ, ಡಯಟ್ ನಿವೃತ್ತ ಉಪನ್ಯಾಸಕ ಟಿ.ಜೆ. ಹಾದಿಮನಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಗುರಮ್ಮ ಸಿದ್ದಾರೆಡ್ಡಿ ಮಾತನಾಡಿದರು.

ಸಂಘದ ಗೌರವ ಖಜಾಂಚಿ ಡಾ. ವಿಜಯ ಕೊಂಡಾ ಅಧ್ಯಕ್ಷತೆ ವಹಿಸಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಚಾಲಕ ಕಲ್ಯಾಣರಾವ್ ಚಳಕಾಪುರೆ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಹುಡಗೆ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT