ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘದ ಮನವಿಗೆ ಸಿ.ಎಂ ಸ್ಪಂದನೆ: ಗಂದಗೆ

Last Updated 24 ಜೂನ್ 2021, 5:12 IST
ಅಕ್ಷರ ಗಾತ್ರ

ಬೀದರ್: ರಾಜ್ಯ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ ಶಿಶುಪಾಲನಾ ರಜೆ ಘೋಷಿಸುವ ಮೂಲಕ ಸರ್ಕಾರಿ ಮಹಿಳಾ ನೌಕರರು ಹಾಗೂ ಮಕ್ಕಳ ಹಿತರಕ್ಷಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದ್ದಾರೆ.

ಈಗಿರುವ ಪ್ರಸೂತಿ ರಜೆಗಳೊಂದಿಗೆ ಕಿರಿಯ ಮಗುವಿಗೆ 18 ವರ್ಷ ತುಂಬುವವರೆಗೆ ಹಾಲುಣಿಸುವಿಕೆ, ಪೋಷಣೆ, ಅನಾರೋಗ್ಯ ಸೇರಿದಂತೆ ಮಕ್ಕಳ ಆರೈಕೆಗಾಗಿ ಮಹಿಳಾ ನೌಕರರಿಗೆ ಒಟ್ಟು ಸೇವಾ ಅವಧಿಯಲ್ಲಿ ಗರಿಷ್ಠ 6 ತಿಂಗಳ ಶಿಶು ಪಾಲನಾ ರಜೆ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ರಜೆ ಸೌಲಭ್ಯ ಪಡೆಯಬಹುದಾಗಿದೆ. ಸಾಂದರ್ಭಿಕ ರಜೆ ಹೊರತಾಗಿ, ನಿಯಮಾನುಸಾರ ಪಡೆಯಲು ಅರ್ಹವಾಗಿರುವ ಸಾಧಾರಣ ರಜೆ ಒಳಗೊಂಡಂತೆ, ಇತರ ರಜೆಗಳೊಂದಿಗೆ ಸಂಯೋಜಿಸಿ ಕೂಡ ಶಿಶುಪಾಲನಾ ರಜೆಗಳನ್ನು ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.

ಈ ರಜೆಗಳನ್ನು ಯಾವುದೇ ರಜೆ ಲೆಕ್ಕದಿಂದ ಕಳೆಯಲಾಗುವುದಿಲ್ಲ. ರಜೆ ಮಂಜೂರಾತಿಗೆ ಪೂರಕ ದಾಖಲೆಗಳನ್ನು ನೀಡುವ ಅಗತ್ಯವೂ ಇಲ್ಲ. ಸೇವಾ ಪುಸ್ತಕದಲ್ಲಿ ನಮೂದಿಸಿರುವ ಮಕ್ಕಳ ವಿವರದ ಆಧಾರದ ಮೇಲೆ ರಜೆ ಮಂಜೂರು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರಾತಿಗಾಗಿ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಡ ಹೇರಿತ್ತು. ಸಂಘದ ಮನವಿಗೆ ಸ್ಪಂದಿಸಿ ಸರ್ಕಾರ ಶಿಶುಪಾಲನಾ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರ ಪೈಕಿ ಶೇ 75 ರಷ್ಟು ಸುಮಾರು 3 ಲಕ್ಷ ಮಂದಿಗೆ ಶಿಶುಪಾಲನಾ ರಜೆ ಲಾಭ ದೊರಕಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT