ಸೋಮವಾರ, ಸೆಪ್ಟೆಂಬರ್ 26, 2022
24 °C

ಕೃಷ್ಣ- ರಾಧೆ ವೇಷ ಧರಿಸಿ ಸಂಭ್ರಮಿಸಿದ ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಗುರುವಾರ ಇಲ್ಲಿಯ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಕ್ಕಳು ಕೃಷ್ಣ ಹಾಗೂ ರಾಧೆಯರ ವೇಷ ಧರಿಸಿ ಸಂಭ್ರಮಿಸಿದರು.

ತಲೆ ಮೇಲೆ ನವಿಲು ಗರಿ ಇದ್ದ ಕಿರೀಟ ತೊಟ್ಟಿದ್ದ ಕೃಷ್ಣ ವೇಷಧಾರಿಗಳು ಕೈಯಲ್ಲಿ ಕೊಳಲು ಹಿಡಿದುಕೊಂಡಿದ್ದರು. ರಾಧೆ ವೇಷಧಾರಿಗಳು ಬಿಂದಿಗೆ ಹಿಡಿದುಕೊಂಡಿದ್ದರು.

ಹಬ್ಬ, ಹರಿದಿನಗಳು, ಮಹಾ ಪುರುಷರ ಜಯಂತಿ ಆಚರಣೆ ಜತೆಗೆ ಶಾಲೆಯಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕೃತಿ ಆಧಾರಿತ ಶಿಕ್ಷಣ ಕೊಡಲಾಗುತ್ತಿದೆ ಎಂದು ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಮಂಗಳೂರೆ ಹೇಳಿದರು.

ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು