ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲೆಗೆ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಭೇಟಿ

Published : 5 ಸೆಪ್ಟೆಂಬರ್ 2024, 16:33 IST
Last Updated : 5 ಸೆಪ್ಟೆಂಬರ್ 2024, 16:33 IST
ಫಾಲೋ ಮಾಡಿ
Comments

ಜನವಾಡ: ಬೀದರ್ ತಾಲ್ಲೂಕಿನ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಗುರುವಾರ ಶಾಲೆಗೆ ಭೇಟಿ ನೀಡಿದರು.

ಶಾಲೆಯಲ್ಲಿ ಮಕ್ಕಳಿಗೆ ಸುರಕ್ಷತೆ ಇಲ್ಲದಿದ್ದರೆ ಹೇಗೆ ಎಂದು ಸ್ಥಳದಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಪ್ರಶ್ನಿಸಿದರು.
ಸಕಾಲಕ್ಕೆ ಸೂಕ್ತ ಮಾಹಿತಿ ಕೊಡದ ಸಿಆರ್‌ಪಿಗೆ ಶೋಕಾಸ್ ನೋಟಿಸ್ ಕೊಡಬೇಕು ಎಂದು ಸೂಚಿಸಿದರು.

ಶಾಲೆಯಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಿಲ್ಲ. ಮಕ್ಕಳ ಸುರಕ್ಷತೆ ನಿಯಮ ಪಾಲಿಸಿಲ್ಲ. ಆಟದ ಮೈದಾನ ಸೇರಿ ಅಗತ್ಯ ಸೌಕರ್ಯಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಯೋಗ್ಯ ಸ್ಥಳಕ್ಕೆ ಶಾಲೆಯನ್ನು ಸ್ಥಳಾಂತರಿಸಿ ಆಯೋಗಕ್ಕೆ ವರದಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪುರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT