ಬೀದರ್: ‘ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳು, ಅಂಗನವಾಡಿಗಳು, ಕಲ್ಯಾಣ ಮಂಟಪಗಳು ಹಾಗೂ ಸರ್ಕಾರಿ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಮಾಹಿತಿ ಬರೆಸಬೇಕು. ಬರೆಸದವರ ವಿರುದ್ಧ ಕ್ರಮ ಜರುಗಿಸಲು ಸಂಬಂಧಿಸಿದವರಿಗೆ ಶಿಫಾರಸು ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳು ಎದುರಿಸುತ್ತಿರುವ ಸವಾಲು, ಸಮಸ್ಯೆ, ಕುಂದು ಕೊರತೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಹೇಳಿಕೊಳ್ಳಲು ಅನುಕೂಲವಾಗುವಂತೆ ಮಕ್ಕಳ ಸಹಾಯವಾಣಿ 1098 ಆರಂಭಿಸಲಾಗಿದೆ. ಎಲ್ಲಾ ಕಡೆಗಳಲ್ಲೂ ಫಲಕದಲ್ಲಿ ಶಾಶ್ವತವಾಗಿ ಬರೆಸಲು ಸುತ್ತೋಲೆ ಹೊರಡಿಸಲಾಗಿದೆ. ಆದರೂ, ನಿಯಮ ಪಾಲಿಸುತ್ತಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಮಕ್ಕಳ ಸಹಾಯವಾಣಿ ಸಂಖ್ಯೆ ಬರೆಸದವರ ಮಾಹಿತಿ ಯಾವುದಾದರೂ ಕಟ್ಟಡಗಳ ಮೇಲೆ ಇರದಿದ್ದಲ್ಲಿ ಸಾರ್ವಜನಿಕರು, ಸಕ್ಷಮ ಪ್ರಾಧಿಕಾರಕ್ಕೆ ದೂರು ಕೊಡಬಹುದು ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.