ಚಿಟಗುಪ್ಪ (ಹುಮನಾಬಾದ್ ): ‘ಪೋಷಕರು ಮಕ್ಕಳಿಗೆ ಸರಿಯಾದ ನೈತಿಕ ಶಿಕ್ಷಣ, ಮಾರ್ಗದರ್ಶನ ನೀಡಬೇಕು’ ಎಂದು ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.

ತಾಲ್ಲೂಕಿನ ಕುಡಂಬಲ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಿಸಿದ ವೀರಭದ್ರೇಶ್ವರ ದೇವಸ್ಥಾನದ ಮಹಾದ್ವಾರದ ಉದ್ಘಾಟನೆ ಮತ್ತು ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿ ದುಶ್ಚಟಗಳು ಬಿರುಗಾಳಿಯಂತೆ ಬರುತ್ತವೆ. ಅವುಗಳಿಂದ ನಾವು ನಮ್ಮನ್ನು ರಕ್ಷಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಆರೋಗ್ಯವೇಭಾಗ್ಯ ಎನ್ನುವವರೇ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ದುಶ್ಚಟಗಳಿಗೆ ಬಲಿಯಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ತಮ್ಮ ನೆರೆಹೊರೆಯಲ್ಲಿ ಕಂಡುಬರುವ ಮಾದಕ ವ್ಯಸನಿಗಳಿಗೆ ತಿಳಿ ಹೇಳುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಪರರ ಕಷ್ಟಕ್ಕೆ ಮಿಡಿಯಬೇಕು. ದಾನ, ಧರ್ಮ ಮಾಡಬೇಕು. ಗುರುವಿನ ವಾಣಿ ಆಲಿಸಲು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ರವಿ ಪಾಟೀಲ, ವೈಜಿನಾಥ ಕುಂಬಾರ, ಶರಣಪ್ಪ ಹುಡೆದ್, ಕೃಷ್ಣಕುಮಾರ ಹಣಕುಣಿ, ಬಸಪ್ಪ ಹುಡೆದ್, ವೈಜಿನಾಥ ಭೊಸಗೆ, ಪ್ರವೀಣ ಬ್ಯಾಲಹಳ್ಳಿ, ದೀಲಿಪ ಪಾಟಿಲ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-33-1200512339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.