ಚಿಟಗುಪ್ಪ (ಹುಮನಾಬಾದ್): ತಾಲ್ಲೂಕಿನ ಮಂಗಲಗಿ ಗ್ರಾಮದ ಪಡಿತರ ಚೀಟಿ ವಿತರಣಾ ಕೇಂದ್ರಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ‘ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಪಡಿತರ ವ್ಯವಸ್ಥೆ ಅತ್ಯಂತ ಮಹತ್ವದ್ದಾಗಿದ್ದು, ಫಲಾನುಭವಿಗಳಿಗೆ ವಿತರಣೆ ಮಾಡುವ ಪಡಿತರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ನೆಟ್ವರ್ಕ್ ಸಮಸ್ಯೆ ತಕ್ಷಣ ಬಗೆಹರಿಸಬೇಕು. ಪಡಿತರ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ’ ಎಂದರು.

ಪ್ರಸ್ತುತ ಈ ತಿಂಗಳು ಕೇಂದ್ರ ಸರ್ಕಾರದ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ಮಾತ್ರ ವಿತರಣೆ ಆಗುತ್ತಿದ್ದು, ರಾಜ್ಯ ಸರ್ಕಾರದ ಪಾಲಿನ ಅಕ್ಕಿ ಪೂರೈಕೆ ಸ್ಥಗಿತಗೊಂಡಿರುವುದರಿಂದ ಜನರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರ ವಿಳಂಬ ಮಾಡದೆ ತನ್ನ ಪಾಲಿನ ಅಕ್ಕಿ ವಿತರಣೆಯನ್ನು ತಕ್ಷಣ ಪುನರಾರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-33-1711422825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.