ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಂಗಲೇರಾ: ಗಾಳಿ–ಮಳೆಗೆ ಉರುಳಿದ ಬಾಳೆ

Published 28 ಮೇ 2024, 16:09 IST
Last Updated 28 ಮೇ 2024, 16:09 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನ ಚಾಂಗಲೇರಾ ಗ್ರಾಮದ ಶಿವಾರದಲ್ಲಿ ಭಾನುವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ  ಗ್ರಾಮದ ಜಗನ್ನಾಥ ವೀರಪ್ಪ ಅವರಿಗೆ ಸೇರಿದ ಬಾಳೆ ತೋಟದಲ್ಲಿನ ಗೊನೆಗಳು ಮುರಿದು ಬಿದ್ದಿವೆ.

ಬಾಳೆ ಗೊನೆ ಬಂದಿದ್ದ ಸುಮಾರು 400ಕ್ಕೂ ಹೆಚ್ಚು ಗಿಡಗಳು ನೆಲಕ್ಕೆ ಉರುಳಿ ಬಿದ್ದಿದ್ದು ₹8 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಗಾಳಿ, ಮಳೆಯಿಂದ ಬೆಳೆನಷ್ಟ ಅನುಭವಿಸಿದ್ದ ರೈತ ಜಗನ್ನಾಥ ಕಂದಾಯ ಇಲಾಖೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಪರಿಹಾರ ವಿತರಿಸಲು ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT