ಚಿಟಗುಪ್ಪ (ಹುಮನಾಬಾದ್): ಆನ್ಲೈನ್ ಮೂಲಕ ನಡೆಯುವ ಔಷಧ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ಚಿಟಗುಪ್ಪ ತಾಲ್ಲೂಕು ಔಷಧ ವ್ಯಾಪಾರಿಗಳ ಸಂಘದಿಂದ ಬುಧವಾರ ಪ್ರತಿಭಟನೆ ಜರುಗಿತು.

ಇಲ್ಲಿನ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಜರುಗಿತು. ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು.

‘ಕೋವಿಡ್ ಸಮಯದಲ್ಲಿ ಕೋರಿಯರ್ ಮೂಲಕ ಔಷಧ ಮಾರಾಟಕ್ಕಾಗಿ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಅವಕಾಶವನ್ನೇ ಬಳಸಿಕೊಂಡು ದೊಡ್ಡ ಕಂಪನಿಗಳು ಸಹ ಔಷಧ ಮಾರುತ್ತಿವೆ. ನಿಗದಿಗಿಂತಲೂ ಹೆಚ್ಚಿನ ರಿಯಾಯಿತಿ ನೀಡಿ, ಗ್ರಾಹಕರ ದಿಕ್ಕು ತಪ್ಪಿಸುತ್ತಿವೆ. ಮಾರಾಟವನ್ನು ನಿಷೇಧಿಸಲು ಕೇಂದ್ರ ಸರ್ಕಾರ ಕಾಯ್ದೆಯನ್ನು ರೂಪಿಸಬೇಕು’ ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ ಐನಾಪುರ, ಸೈಯದ್ ರಾಶದ್ ಅಲಿ ಪಟೇಲ್, ರಾಜಪ್ಪ ಧುಮ್ಮನಸೂರ್, ವಿಜಯಕುಮಾರ ವಿಜಯಪುರೆ ನಿರ್ಣಾ, ರಾಮದಾಸ ಮಂಕಲ್, ಸಿರಮತ್ ಮಂಕಲ್ ಮಹಮ್ಮದ್ ಅಪರ್ ಪಾಷಾ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-33-959674824

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.