ಚಿಟಗುಪ್ಪ (ಹುಮನಾಬಾದ್): ತಾಲ್ಲೂಕಿನ ಬೇಮಳಖೆಡಾ ಗ್ರಾಮದ ಆರ್ದಶ ವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶಾಲಾ ಆರಂಭೋತ್ಸವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹಾಜರಾಗಲಿಲ್ಲ. ಆರಂಭೋತ್ಸವ ನಿಮಿತ್ತ ಶಾಲೆಯ ಎಲ್ಲಾ ಕೊಠಡಿಗಳನ್ನು ಸ್ವಚ್ಛತೆಗೊಳಿಸಲಾಗಿತ್ತು. ಶಾಲೆಯ ಮುಖ್ಯ ದ್ವಾರಕ್ಕೆ ಚೆಂಡು ಹೂ ಮತ್ತು ಮಾವಿನ ಎಲೆಗಳಿಂದ ಸಿಂಗಾರ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ವಿಶೇಷವಾಗಿ ಚಿತ್ರಾನ್ನ ಮತ್ತು ಸಿಹಿ ತಿಂಡಿ ಸಹ ಸಿದ್ಧಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಬರದೆ ಇರುವ ಕಾರಣ ಎಲ್ಲವೂ ಹಾಗೆ ಉಳಿದುಕೊಂಡಿದೆ ಎಂದು ಶಾಲೆಯ ಪ್ರಾಂಶುಪಾಲ ರವಿ ರಾಠೋಡ್ ತಿಳಿಸಿದರು.

ಕನಕಟ್: ಶಾಲಾ ಆರಂಭೋತ್ಸವದ ಅಂಗವಾಗಿ ತಾಲ್ಲೂಕಿನ ಕನಕಟ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪುಪ್ಪವೃಷ್ಟಿ ಮಾಡುವ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗುಡಾಳ ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳಿಗೆ ಪ್ರಸ್ತಕ ವಿತರಣೆ ಮಾಡಿ ಮಾತನಾಡಿ ಅವರು, ಸಮಕ್ಕೆ ಸರಿಯಾಗಿ ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ಬರಬೇಕು . ನಿತ್ಯವೂ ಶಾಲೆಯಲ್ಲಿ ತರಗತಿ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕೆಂದು ಸೂಚಿಸಿದರು.

ಗಡವಂತಿ: ತಾಲ್ಲೂಕಿನ ಗಡವಂತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಆರಂಭೋತ್ಸವದ ಸಂಭ್ರಮ ಜರುಗಿತು. ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಕರು ಪುಪ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ನಂತರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಿ ಸಿಹಿ ತಿನಿಸಿದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕ ಮಾಣಿಕರಾವ್ ಪಂಚಾಳ್, ಶಿಕ್ಷಕರಾದ ಶರದಕುಮಾರ್ ನಾರಾಯಣಪೇಕರ್, ಮಹನಂದಾ, ಜೈಶ್ರೀ, ರಘುನಾಥ , ರಾಜಕುಮಾರ್ ಸೇರಿದಂತೆ ಇತರರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-877637595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.