ಶುಕ್ರವಾರ, ಅಕ್ಟೋಬರ್ 22, 2021
29 °C

ಬೀದರ್ ಬಂದ್‍ಗೆ ಕ್ರಿಶ್ಚಿಯನ್ ಅಸೋಸಿಯೇಷನ್ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹಾಗೂ ಸಚಿವ ಸಂಪುಟದಿಂದ ಪ್ರಭು ಚವಾಣ್ ಅವರನ್ನು ಕೈಬಿಡಲು ಒತ್ತಾಯಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಅ. 11 ರಂದು ಕರೆ ನೀಡಿರುವ ಬೀದರ್ ಬಂದ್‍ಗೆ ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ.

ಸದಾಶಿವ ಆಯೋಗದ ವರದಿ ಸಲ್ಲಿಕೆಯಾಗಿ 9 ವರ್ಷಗಳೇ ಕಳೆದಿವೆ. ಆದರೆ, ಜಾರಿಗೆ ವಿಳಂಬ ಮಾಡಲಾಗುತ್ತಿದೆ. ಸಮಿತಿಯು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವುದು ನ್ಯಾಯ ಸಮ್ಮತವಾಗಿದೆ ಎಂದು ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾದಿಗ ಸಮುದಾಯದ ಸುಮಾರು 50 ಲಕ್ಷ ಜನರಿದ್ದಾರೆ. ಸಮುದಾಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ತೀರಾ ಹಿಂದುಳಿದಿದೆ. ಹೀಗಾಗಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಒಳ ಮೀಸಲಾತಿ ಅಗತ್ಯ ಇದೆ ಎಂದು ಪ್ರತಿಪಾದಿಸಿದ್ದಾರೆ.

ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರು ಸದಾಶಿವ ಆಯೋಗದ ವರದಿ ಅವೈಜ್ಞಾನಿಕ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಹಿಂದೆ ಆಧಾರ ರಹಿತವಾಗಿದ್ದ ಶಾಸಕ ಗೂಳಿಹಟ್ಟಿ ಶೇಖರ್ ಅವರ ಹೇಳಿಕೆಯನ್ನೂ ಚವಾಣ್ ಸಮರ್ಥಿಸಿದ್ದರು. ಜವಾಬ್ದಾರಿ ಸ್ಥಾನದಲ್ಲಿರುವ ಅವರು ತಮ್ಮ ಹೇಳಿಕೆ ಮೂಲಕ ಒಂದು ಸಮುದಾಯಕ್ಕೆ ನೋವು ಉಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಹಾಗೂ ಪ್ರಭು ಚವಾಣ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.