ಬುಧವಾರ, ಮೇ 12, 2021
27 °C
ಸೇಂಟ್ ಪೌಲ್ ಮೆಥೋಡಿಸ್ಟ್ ಸೆಂಟ್ರಲ್‌ ಚರ್ಚ್‌ನ ರೆವರೆಂಡ್ ಎಂ.ಪಿ.ಜಯಪೌಲ್ ಹೇಳಿಕೆ

ಕೋವಿಡ್‌ ನಿಯಂತ್ರಣಕ್ಕಾಗಿ ಚರ್ಚ್‌ ಸಭಾ ಕಾರ್ಯಕ್ರಮ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸೋಂಕಿನ ಸರಪಳಿ ತುಂಡರಿಸುವ ದಿಸೆಯಲ್ಲಿ ಇಲ್ಲಿಯ ಸೇಂಟ್ ಪೌಲ್ ಮೆಥೋಡಿಸ್ಟ್ ಸೆಂಟ್ರಲ್‌ ಚರ್ಚ್ ಸ್ವಯಂ ಪ್ರೇರಣೆಯಿಂದ ಮೂರು ವಾರ ಸಭಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿದೆ.

ಕೋವಿಡ್‌ ಕಾರಣ ಭಾನುವಾರದ ಪ್ರಾರ್ಥನೆಯನ್ನು ರದ್ದುಗೊಳಿಸಲಾಗಿದೆ. ಮುಂದಿನ ಎರಡು ಭಾನುವಾರ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸದಿರಲು ನಿರ್ಧರಿಸಲಾಗಿದೆ. ಚರ್ಚ್‌ನ ಸದಸ್ಯರು ಹಾಗೂ ಭಕ್ತರು ತಮ್ಮ ತಮ್ಮ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸಬೇಕು ಎಂದು ಚರ್ಚ್‌ನ ರೆವರೆಂಡ್ ಎಂ.ಪಿ.ಜಯಪೌಲ್ ಮನವಿ ಮಾಡಿದ್ದಾರೆ.

ಧಾರ್ಮಿಕ ಸಂಸ್ಥೆಗಳು ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಸಹಕಾರ ನೀಡಬೇಕಾಗಿದೆ. ಮೊದಲ ಹೆಜ್ಜೆ ಯಾಗಿ ಸಮಾಜದ ಹಿತದೃಷ್ಟಿಯಿಂದ ಚರ್ಚ್‌ ನಿರ್ಧಾರ ಕೈಗೊಂಡಿದೆ. ಇನ್ನುಳಿದ ಧಾರ್ಮಿಕ ಸಂಸ್ಥೆಗಳು ಇದೇ ರೀತಿಯ ನಿಯಮ ಪಾಲಿಸಿದರೆ ಅನುಕೂಲವಾಗಿದೆ ಎಂದು ಹೇಳಿದ್ದಾರೆ.

ಪ್ರತಿಯೊಬ್ಬರು ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಬೇಕು. 45 ವರ್ಷ ಮೇಲ್ಪಟ್ಟವರು ಕೋವಿಡ್ ಕೋವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಯನ್ನು ತಪ್ಪದೇ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು