ಬೀದರ್: ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆ ಪುನಃ ಆರಂಭಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅದರ ಸಾಧಕ–ಬಾಧಕಗಳ ಕುರಿತು ಚರ್ಚಿಸಿದರು.

ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ವಿಮಾನಯಾನ ಸೇವೆ ಒದಗಿಸುವ ಖಾಸಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.

‘ಉಡಾನ್’ ಯೋಜನೆ ಅಡಿ ನೀಡಲಾಗುತ್ತಿದ್ದ ಅನುದಾನ ನಿಲ್ಲಿಸಿರುವ ಕಾರಣ ಖಾಸಗಿ ವಿಮಾನಯಾನ ಸೇವೆ ಒದಗಿಸುವ ಸಂಸ್ಥೆಗಳು ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಿವೆ. ಸೇವೆ ಪುನಃ ಆರಂಭಿಸುವುದರ ಬಗ್ಗೆ ಚರ್ಚಿಸಿ, ಮುಂದಿನ ಸಚಿವ ಸಂಪುಟದ ಸಭೆಯ ಮುಂದೆ ಈ ಪ್ರಸ್ತಾವ ಮಂಡಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.