ಗುರುವಾರ , ಮಾರ್ಚ್ 30, 2023
24 °C
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ಹೇಳಿಕೆ

ಬೀದರ್: 26ಕ್ಕೆ ನಾಗರಿಕ ಸೇವೆ ಪುನಶ್ಚೇತನ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಜಿಲ್ಲಾಡಳಿತದ ವತಿಯಿಂದ ಇಲ್ಲಿಯ ಜಿಲ್ಲಾ ರಂಗ ಮಂದಿರದಲ್ಲಿ ಸೆಪ್ಟೆಂಬರ್ 26ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30ರ ವರೆಗೆ ನಾಗರಿಕ ಸೇವೆ ಪುನಶ್ಚೇತನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌ ತಿಳಿಸಿದರು.

ಬೀದರ್‌ನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಮೂಡಿಸಲು ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪಿ.ಸಿ ಜಾಫರ್ ನಡೆಸಿದ ವಿಶೇಷ ಕಾರ್ಯಕ್ರಮವನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಜನಪ್ರತಿನಿಧಿಗಳು ಕಾರ್ಯಕ್ರಮ ಉದ್ಘಾಟಿಸಿದ ನಂತರ ಏಳು ಐಎಎಸ್, ತಲಾ ಇಬ್ಬರು ಐಪಿಎಸ್, ಐಆರ್‌ಎಸ್ ಹಾಗೂ ಐದು ಕೆಎಎಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ರಂಗ ಮಂದಿರದಲ್ಲಿ 300 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗುವುದು. ಯುಟ್ಯೂಬ್‌ ಲೈವ್‌ಗೂ ವ್ಯವಸ್ಥೆ ಮಾಡಲಾಗುವುದು. ಆಕಾಂಕ್ಷಿಗಳು ಈ ಲಿಂಕ್‍ನ್ನು https://rb.gy/kg2lnu ಬಳಸುವ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡರೆ ಕಾರ್ಯಕ್ರಮವನ್ನು Youtube ಲಿಂಕ್ youtube/civilservicesbidar ಹಾಗೂ facebook ಲಿಂಕ್ https://www.facebook.com/deo.bidar ಮುಖಾಂತರ ವೀಕ್ಷಿಸಬಹುದು ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಕಲ ಮೂಲಸೌಕರ್ಯ ಇದ್ದರೆ ಆಯಾ ಕಾಲೇಜುಗಳಲ್ಲೇ ಕಾರ್ಯಕ್ರಮದ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಬಹುದಾಗಿದೆ. ಬಸವಕಲ್ಯಾಣದ ಅನುಭವ ಮಂಟಪದಲ್ಲೂ ನೇರ ಪ್ರಸಾರದ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ್‌ ಡಿ.ಎಲ್. ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು