ಶನಿವಾರ, ಸೆಪ್ಟೆಂಬರ್ 18, 2021
24 °C

ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಅಗತ್ಯ: ಸತೀಶ ಬೆಳಕೋಟೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಉತ್ತಮ ಆರೋಗ್ಯಕ್ಕೆ ಸುತ್ತಮುತ್ತಲಿನ ಪರಿಸರ ಶುಚಿಯಾಗಿ ಇಟ್ಟುಕೊಳ್ಳುವುದು ಅಗತ್ಯವಾಗಿದೆ ಎಂದು ರೈಸಿಂಗ್ ಹ್ಯಾಂಡ್ಸ್ ಯುತ್ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಸತೀಶ ಬೆಳಕೋಟೆ ಹೇಳಿದರು.

ಇಲ್ಲಿಯ ಶರಣ ಉದ್ಯಾನ ಸಮೀಪದ ಸಪ್ತಗಿರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆದ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶುಚಿತ್ವಕ್ಕೆ ಒತ್ತು ನೀಡಿದ್ದಲ್ಲಿ ಕೋವಿಡ್‍ನಿಂದ ಬೇಗ ಪಾರಾಗಬಹುದು ಎಂದು ತಿಳಿಸಿದರು.

ಉಪನ್ಯಾಸಕ ಅನಿಲ್ ಜಾಧವ್ ನಾಗರಿಕರಿಗೆ ಸ್ವಚ್ಛತೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಂಗಲಾ ಮಹಿಳಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಮಂಗಲಾ ಮರಕಲೆ, ಉಪನ್ಯಾಸಕರಾದ ಅಂಬಿಕಾ ಸಾವಳಗಿ, ಮಾಧವ ತಮಸಾಳೆ, ಮಂದಾರ ಪಟವಾರಿ, ಸಂಜುಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.